6:36 PM Sunday1 - November 2026
ಬ್ರೇಕಿಂಗ್ ನ್ಯೂಸ್
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ…

ಇತ್ತೀಚಿನ ಸುದ್ದಿ

ಮಸ್ಕಿ | ಕುರುಕುಂದ ಗ್ರಾಮದಲ್ಲಿ ಸಂಭ್ರಮದ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

01/11/2026, 18:27

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಉಪ್ಪಲ್ ದೊಡ್ಡಿ ವಲಯದ ಕುರುಕುಂದ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮಕ್ಕೆ ಪರಮಪೂಜ್ಯ ಶ್ರೀ ನಾಗಪ್ಪ ತಾತನವರ ಶಿಷ್ಯರಾದ ಶ್ರೀ ಅಮರೇಶ್ ಶರಣೂರು ಗೌಡನಬಾವಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಊರಿನ ಗಣ್ಯರಾದ ಶ್ರೀ ವೀರಪ್ಪಣ್ಣ ಸಾಹುಕಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುರುಕುಂದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸರ್ವಮಂಗಳ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ, ರಾಯಚೂರು ಜಿಲ್ಲೆಯ ಅಧ್ಯಕ್ಷರಾದ ಶ್ರೀ ಅಂಬರೀಶ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಾಯಚೂರು ಜಿಲ್ಲೆಯ ನಿರ್ದೇಶಕರಾದ ಶ್ರೀ ರಾಘವೇಂದ್ರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳ ಮಹತ್ವ, ಸಾಮೂಹಿಕ ಪೂಜೆಯಿಂದ ಸಮಾಜದಲ್ಲಿ ಮೂಡುವ ಭಕ್ತಿ ಭಾವನೆ ಹಾಗೂ ಪರಸ್ಪರ ಸಹಕಾರ ಮತ್ತು ಸಾಮರಸ್ಯದ ಕುರಿತು ಸಂದೇಶ ನೀಡಲಾಯಿತು. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮೀಣ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದರ ಜೊತೆಗೆ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಹಬಾಳ್ವೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ.

ಕಾರ್ಯಕ್ರಮದಲ್ಲಿ ಶ್ರೀ ಶೇಕ್ರಯ್ಯ ಸ್ವಾಮಿ ಹಿರೇಮಠ ಶ್ರೀ ಸಿದ್ದಪ್ಪ, ಶ್ರೀ ರಾಮನಗೌಡ, ಶ್ರೀ ಗುಡದಪ್ಪ ಸೇರಿದಂತೆ ಊರಿನ ಗಣ್ಯರು, ಪೂಜಾ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಹಾಗೂ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು. ಅತಿಥಿಗಳು ಮತ್ತು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಭಕ್ತಿಭಾವದ ವಾತಾವರಣದಲ್ಲಿ ನಡೆಯಿತು ಶ್ರೀಮತಿ ಸರ್ವ ಮಂಗಳ ಹಿರೇಮಠ ಕುರಕುಂದ ಅಧ್ಯಕ್ಷರು ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಗಮಿಸಿದ ಎಲ್ಲರೂ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು