2:30 PM Tuesday1 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ…

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು