8:43 PM Sunday7 - December 2025
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ

ಇತ್ತೀಚಿನ ಸುದ್ದಿ

ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ ಸಚಿವ ಕುಮಾರಸ್ವಾಮಿ

07/12/2025, 20:35

ನವದೆಹಲಿ(reporterkarnataka.com): ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ. ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ! ಎಂದು ಕಟುವಾಗಿ ಟೀಕಿಸಿದ್ದಾರೆ.
ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ; ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ!!?? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.
ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು