12:15 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು ದುರಂತ ಅಂತ್ಯ

19/04/2026, 23:06

ಮೈಸೂರು(reporterkarnataka.com): ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.
ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*ನಡೆದದ್ದೇನು?*
ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಇಂದು ಉರೂಸ್ ಹಿನ್ನೆಲೆ ದರ್ಗಾಕ್ಕೆ ಬೆಂಗಳೂರು ಮತ್ತು ಊಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಂಟು ಜನರ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ತೆರಳಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಉಳಿದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

*ಮೃತರು*
ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13), ಇನ್ನೊಬ್ಬರ ಗುರುತು ಪತ್ತೆ ಆಗಿಲ್ಲ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು