ಇತ್ತೀಚಿನ ಸುದ್ದಿ
ಮೈಸೂರು ದಸರಾ: ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಪೂಜೆ
02/10/2025, 13:56

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ.
ಮೈಸೂರು ಅರಮನೆ ಬಲರಾಮ ದ್ವಾರದ ಬಳಿ ಈಡುಗಾಯಿ ಒಡೆದು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ.ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮತ್ತಿತರರಿದ್ದರು.
ಈ ಸಂದರ್ಭದಲ್ಲಿ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ , ಬೆಳೆಯಾಗಿದೆ. ಜಲಾಶಯಗಳು ತುಂಬಿ ಹರಿದಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದಿದ್ದರಿಂದ ಬೆಳೆ ಹಾನಿಯಾಗಿದೆ. ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದರು.