3:33 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು ಗುಂಡು

28/07/2026, 18:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಅಕ್ರಮವಾಗಿ ಕಾಡುಹಂದಿಗಳನ್ನು ಬೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ತಂಡದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಅನ್ವಿತ್ ಬಂಧಿತ ಆರೋಪಿ. ಈತನ ಕಾಲಿಗೆ ಗುಂಡು ಬಿದ್ದಿದೆ. ಜೊತೆಗೆ ಬಂದಿದ್ದ ಮೂವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರ್ಶನ್, ಮಂಜು ಮತ್ತು ಕಿರಣ್ ಪರಾರಿಯಾದ ಆರೋಪಿಗಳು.
ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಆಲ್ಟೋ ಕಾರನ್ನು ಸಿಬ್ಬಂದಿ ತಡೆದು ತಪಾಸಣೆ ನಡೆಸಲು ಯತ್ನಿಸಿದಾಗ, ಕಾರಿನಲ್ಲಿದ್ದ ನಾಲ್ವರು ಆರೋಪಿಗಳು ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಜಾಗರೂಕರಾಗಿ ಗುಂಡು ಹಾರಿಸಿ ಅನ್ವಿತ್‌ನನ್ನು ಸೆರೆಹಿಡಿದಿದ್ದಾರೆ. ಪರಾರಿಯಾದವರಿಗಾಗಿ ಶೋಧ ನಡೆಯುತ್ತಿದೆ. ಕಾರ್ಯಾಚರಣೆ ವೇಳೆ ಬೇಟೆಗಾರರಿಂದ ಎರಡು ಕಾಡುಹಂದಿಗಳ ಮೃತದೇಹ, ಒಂದು ಮಚ್ಚು, ಎರಡು ಟಾರ್ಚ್‌ಗಳು, ಒಂದು ಟಾರ್ಪಲ್, ಒಂದು ಮೊಬೈಲ್ ಫೋನ್ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಆಲ್ಟೋ ಕಾರನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು