3:50 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮೈಸೂರು ವಿವಿ: ಕಚ್ಚೆ ಹರುಕ ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು

06/08/2021, 09:42

ಮೈಸೂರು(reporterkarnataka.com): ಮನೆಯಲ್ಲಿ ಪತ್ನಿ ಇಲ್ಲದ ವೇಳೆ ಸಂಶೋಧನ ವಿದ್ಯಾರ್ಥಿನಿಯೊಬ್ಬಳನ್ನು ಮನೆಗೆ ಕರೆಸಿ ಪ್ರಾಧ್ಯಾಪಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಂತ್ರಸ್ತೆ ಹಾಗೂ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಮಚಂದ್ರಪ್ಪ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ರಾಮಚಂದ್ರಪ್ಪ ಅವರ ಪತ್ನಿ ಇದೇ ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕಿ.

ವಿದ್ಯಾರ್ಥಿನಿಯು ರಾಮಚಂದ್ರಪ್ಪರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮಾಡುತ್ತಿದ್ದು, ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ.ಯುವತಿ ಸಹಾಯಕ್ಕಾಗಿ ಕೂಗಿದ್ದಾಳೆ ಎನ್ನಲಾಗಿದೆ. ಆಗ ಕಾಲೇಜಿನಿಂದ ಮನೆಗೆ ಮರಳಿದ ಪತ್ನಿಗೆ ವಿಷಯ ತಿಳಿದು ಸಂತ್ರಸ್ತೆ ಯೊಂದಿಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ತನ್ನ ಪತಿಯ ವಿರುದ್ಧವೇ ಆಕ್ರೋಶ ಹೊರಹಾಕಿರುವ ಪ್ರಾಧ್ಯಾಪಕಿ, ರಾಮಚಂದ್ರಪ್ಪ ಮಾನಸಗಂಗೋತ್ರಿಯಲ್ಲಿ ಹಲವು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆದರೆ ಈ ಬಗ್ಗೆ ಯಾವುದೇ ಆಧಾರ ಸಿಕ್ಕಿರಲಿಲ್ಲ. ಆದ್ದರಿಂದ ಹಿಂದೆ ಈತನ ವಿರುದ್ಧ ದೂರು ನೀಡಲಾಗಲಿಲ್ಲ. ಗುರುವಾರ ಸ್ಪಷ್ಟ ಸಾಕ್ಷ್ಯ ಸಿಕ್ಕಿದ್ದು, ಸಂತ್ರಸ್ತೆಯೊಂದಿಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಸಂತ್ರಸ್ತೆ ಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು