10:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mysore | ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

09/06/2025, 13:36

ಮೈಸೂರು(reporterkarnataka.com): ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಮೋದಿ ಪ್ರಚಾರದಿಂದ ಬದುಕಿರುವುದು.
ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

*ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ:
ಪ್ರಧಾನಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.

*ಸುಳ್ಳು ವಿಚಾರಗಳಿಗೆ ಪ್ರಚಾರ:
ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು