6:24 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲೂ ಮೈಸೂರಿನ ‘ಮೈಲಾರಿ’ ಘಮ: ಹೋಟೆಲ್ ಉದ್ಘಾಟಿಸಿ, ದೋಸೆ, ಕಾಶಿ ಹಲ್ವಾ ಸವಿದ ಮುಖ್ಯಮಂತ್ರಿ

23/01/2026, 18:21

* ಇಂದಿರಾನಗರದಲ್ಲಿ 'ಒರಿಜಿನಲ್‌ ಮೈಲಾರಿ ಹೋಟೆಲ್‌-1938'ಗೆ ಅದ್ಧೂರಿ ಚಾಲನೆ

* ಇನ್ನು ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗಬೇಕಿಲ್ಲ:

ಬೆಂಗಳೂರು(reporterkarnataka.com): ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.


ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, “ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನು ಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

*ಗಣ್ಯಾತಿಗಣ್ಯರ ಸಾಕ್ಷಿ:*
ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಉಪಸ್ಥಿತರಿದ್ದು, 87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತು ಗೌರಿಗದ್ದೆಯ ವಿನಯ್ ಗುರೂಜಿ ಅವರು ಸಾನ್ನಿಧ್ಯ ವಹಿಸಿದ್ದರು.

*ನಾಲ್ಕನೇ ತಲೆಮಾರಿನ ಸಾರಥ್ಯ:*
1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‌ಬಾದ್‌ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು.
ಡಾ. ರಾಜ್‌ಕುಮಾರ್‌ರಿಂದ ಹಿಡಿದು ಸಚಿನ್ ತೆಂಡೂಲ್ಕರ್‌ವರೆಗೆ ಮತ್ತು ಬಿಬಿಸಿ (BBC) ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್, ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು