2:17 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ ಖಂಡ್ರೆ

31/12/2024, 20:11

•ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗದಂತೆ ಕ್ರಮ- ಅರಣ್ಯ ಸಚಿವರು
•ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ:ಈಶ್ವರ ಖಂಡ್ರೆ

ಬೀದರ್(reporterkarnataka.com): ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.
ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು