5:42 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೈಸೂರು ‘ಮುಡಾ’ ಹಗರಣದ ಸಿಬಿಐ ತನಿಖೆಗೆ ಒಪ್ಪಿಸಿ: ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

06/11/2024, 18:23

ಬೆಂಗಳೂರು(reporterkarnataka.com): ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.
ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು.
ಉಪ ಚುನಾವಣೆ ಸಂಬಂಧ ಪ್ರಶ್ನಿಸಿದಾಗ, 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಉತ್ತರ ಕೊಟ್ಟರು.
ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ; ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.
ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು