6:06 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು