6:39 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು: ಮೃತದೇಹ ಪತ್ತೆ

19/04/2026, 13:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿದ್ದರಾಮಯ್ಯ ಸೇತುವೆ‌ ಕೆಳಭಾಗಕ್ಕೆ ಇಳಿದು ಸ್ನಾನಕ್ಕೆ‌‌ ತೆರಳಿದ್ದ ಮೂವರು ಪೈಕಿ ಒಬ್ಬರು ನೀರು ಪಾಲಾದ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ.
ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ಇವರು ತೆರಳಿದ್ದರು. ಇಬ್ಬರು ಮೇಲೆ ಬಂದರೂ ಮತ್ತೋರ್ವ ಹೊರಬರಲಾರದೆ ನೀರಿನಲ್ಲಿ ಮುಳುಗಿದ್ದಾನೆ.
ಎನ್.ಆರ್.ಪುರದ ಸಿಗುವಾನಿ‌ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಕಳೆದ ಭಾನುವಾರವಷ್ಟೆ ಸಿಎಂ ಸಿದ್ದರಾಮಯ್ಯ ಅವರು ಸೇತುವೆ ಉದ್ಘಾಟಿಸಿದ್ದರು.
ಸಿದ್ದರಾಮಯ್ಯ ಸೇತುವೆ ಬಳಿ ವ್ಯಕ್ತಿ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರ ನೆರವಿನಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಮೃತರನ್ನು ಎನ್.ಆರ್ ಪುರ ತಾಲೂಕಿನ ಸಿಗುವಾನಿ ನಿವಾಸಿ ನಿತಿನ್ (38) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು