3:08 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು

06/04/2026, 14:57

ಚಿಕ್ಕಮಗಳೂರು(reporterkarnataka.com); ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಇಂದು ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.
ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲೇ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಮತ್ತು ಕುಟುಂಬದವರಲ್ಲಿ ಈ ಘಟನೆ ತೀವ್ರ ಶೋಕವನ್ನುಂಟು ಮಾಡಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು