2:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ಅಧ್ಯಕ್ಷ ಸ್ಥಾನ ಬಿಟ್ಟುಕೊಡದಕ್ಕೆ ನೊಂದು ಈ ಕೃತ್ಯ; ವಾಟ್ಸಾಪ್ ಸ್ಟೇಟಸ್ ನಲ್ಲಿ ಆಕೆ ಹಾಕಿದ್ದೇನು? 

13/11/2021, 10:35

ಸಂತೊಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ

ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದಾ ಆತ್ಮಹತ್ಯೆ ಯತ್ನ ನಡೆಸಿದ್ದಾರೆ.

5-6 ಬಗೆಯ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ ಪಟ್ಟಣ ಪಂಚಾಯಿತಿ ಸದಸ್ಯೆ ಯತ್ನಿಸಿದ್ದಾರೆ.

ಜುಬೇದಾ ಅವರಿಗೆ ಎನ್.ಆರ್.ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.ಈ ಹಿಂದೆ ನಡೆದ ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಭಾನು ಅಧ್ಯಕ್ಷೆ ಅವಧಿ ಮುಗಿದಿದೆ. ಸುರಯ್ಯಾ ಬಾನು, ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸುರಯ್ಯಾ ಬಾನು ರಾಜೀನಾಮೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರಲ್ಲೇ ಮುಸುಕಿನ ಗುದ್ದಾಟ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು