12:08 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ನ.30ರ ಬಳಿಕ ಉಚಿತ ಪಡಿತರ ವಿತರಣೆ ಇಲ್ಲ; ಕೇಂದ್ರ ಸರಕಾರ ಸ್ಪಷ್ಟನೆ

06/11/2021, 13:48

ಹೊಸದಿಲ್ಲಿ(reporterkarnataka.com): ಕೊರೊನ ಲಾಕ್ಡೌನ್ ವಿತರಿಸಲಾಗುತ್ತಿದ್ದ ಉಚಿತ ಪಡಿತರ ನಿಲ್ಲಿಸಲಾಗುವುದು ಎಂದು ಕೇಂದ್ರ ಸರ್ಕಾರ  ತಿಳಿಸಿದೆ. ಸರಕಾರ ನವೆಂಬರ್ 30 ರ ಬಳಿಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ..  

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಕೋವಿಡ್-19 ನಿಂದ ಉಂಟಾದ ತೊಂದರೆ ನಿವಾರಿಸಲು PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ಆರಂಭದಲ್ಲಿ, ಈ ಯೋಜನೆಯನ್ನು ಏಪ್ರಿಲ್-ಜೂನ್ 2020 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು