9:18 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

05/09/2024, 21:15

ಸಂತೋಷ್ ಹಳ್ಳೂರ ಬೆಳಗಾವಿ

info.reporterkarnataka@gmail.com

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಡಲಗಿಯ ಆಶ್ರಯದಲ್ಲಿ ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ರೈತರಾದ ಅಲ್ಲ ಗೌಡ ಪಾಟೀಲ್ ಅವರು ಕಬ್ಬಿನ ಸಸಿಗಳ ತಯಾರಿ ಬಗ್ಗೆ ಸಸಿ ನಾಟಿ ಮಾಡುವ ವಿಧಾನಗಳ ಬಗ್ಗೆ ಬಿಜೋಪಚಾರ ಮಾಡುವ ವಿಧಾನಗಳ ಬಗ್ಗೆ ರೋಗಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕರಾದ ಮೈಲಾರಪ್ಪ ಪೈಲಿ ಅವರು ಪ್ರಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಶಿವಲೀಲಾ ಸಬರದ, ಒಕ್ಕೂಟದ ಪದಾಧಿಕಾರಿಗಳಾದ ಲಕ್ಷ್ಮಿ ಮಾಯಣ್ಣವರ್, ಸ್ವ ಸಹಾಯ ಸಂಘಗಳ ಸದಸ್ಯರು ರೈತ ಬಾಂಧವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಯಾದ ಮದಿನಾ ನಾಯಿಕವಾಡಿ ಕಾರ್ಯಕ್ರಮ ಸ್ವಾಗತಿಸಿದರು. ಕವಿತಾ ದಿನ್ನಿಮನಿ. ನಿರೂಪಿಸಿದರು, ಲಕ್ಷ್ಮಿ ಆಸೀರೊಟ್ಟಿ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು