4:23 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್

26/09/2021, 21:39

ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ಧೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ.

ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು