6:05 PM Friday17 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಾನು ‘ತುಳುವ’ ಎನ್ನುವುದೇ ನಂಗೆ ಹೆಮ್ಮೆ: ಮಂಗಳೂರಿನಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ

17/01/2025, 13:05

ಮಂಗಳೂರು(reporterkarnataka.com): ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳುನಾಡಿನ ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ ಎಂದು ಬಾಲಿವುಡ್ ಖ್ಯಾತ ನಟ ಸುನಿಲ್ ಶೆಟ್ಟಿ ಹೇಳಿದರು.
ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸೆ ಹಿಂದಿನಿಂದಲೂ ಇತ್ತು. ಆದರೆ ಕಾಲ ಕೂಡಿ ಬಂದಿರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಬರುತ್ತಿರುವ ಜೈ ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ನಟಿಸುತ್ತಿದ್ದೇನೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
ಕಾಮಿಡಿ ಸಿನಿಮಾಗಳಲ್ಲಿ ಅಭಿನಯ ಮಾಡಬೇಕು ಎನ್ನುವ ಆಸೆ ಇದೆ. ನನಗೆ ತುಳು ಸಿನಿಮಾದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಮಿಡಿಯನ್ ಆಗಿ ಅಭಿನಯಿಸಬೇಕು. ಆದರೆ ಈಗ ಜೈ ಸಿನಿಮಾದಲ್ಲಿ ಅತಿಥಿ ಪಾತ್ರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ನೋಡೋಣ ಎಂದು ಹೇಳಿದರು.
ಸುನಿಲ್ ಶೆಟ್ಟಿ ಅವರು ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಜೈ ತುಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್ ನಡೆಯುತ್ತಿದೆ.
ಜೈ ಸಿನಿಮಾಕ್ಕೆ ಮೂರನೆ ಹಂತದ ಚಿತ್ರೀಕರಣ ನಡೆಯುತ್ತಿದ್ದು ಹಾಡಿನ ಚಿತ್ರೀಕರಣ ಇನ್ನು ನಡೆಯಲಿದೆ.
ಜೈ ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು ಸಿನಿಮಾಕ್ಕೆ ಕರಾವಳಿಯನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಉಡುಪಿ, ಕುಂದಾಪುರ ಮಂಗಳೂನಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತಿದ್ದು, ಅನಿಲ್ ಶೆಟ್ಟಿ,
ಸುಧಾಕರ್ ಶೆಟ್ಟಿ ಹಾಗೂ ಮಂಜುನಾಥ್ ಅತ್ತಾವರ ನಿರ್ಮಾಪಕರಾಗಿದ್ದು ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು ಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ, ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ಮಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ಪ್ರೊ ಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ರಾಜ್ ದೀಪಕ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ.


ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಜೈ ತುಳು ಚಿತ್ರ ಆದಷ್ಟು ಬೇಗ ತೆರೆಕಾಣಲಿದೆ.
ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಮಂಜುನಾಥ್ ಅತ್ತಾವರ, ರೂಪೇಶ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು