3:57 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ

20/08/2021, 22:51

ಕಾರವಾರ(reporterkarnataka.com):
ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

ದಿನೇಶ ಹೆಗಡೆ, ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ. ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು