ಇತ್ತೀಚಿನ ಸುದ್ದಿ
ನಡೆದಾಡುವ ದೇವರು: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ
02/01/2023, 23:11

ವಿಜಯಪುರ(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಸೋಮವಾರ ಶಿವೈಕ್ಯರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಸದೆ ಸೋಮವಾರ ನಿಧನರಾಗಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಸ್ವಾಮೀಜಿಗಳು ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿ ಬಂದಿದ್ದರು.