8:36 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

08/11/2024, 11:27

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಸಮಾಜದಲ್ಲಿ ವಿದ್ಯಾವಂತರಿಂದಲೇ ಹೆಚ್ಚು ಅಪರಾಧಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಾಲೂಕಿನ ಬೊಬ್ಬಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು ಅಂಕ ಗಳಿಸುವುದು ಪದವಿ
ಪಡೆಯುವುದು ಮಾತ್ರ ಶಿಕ್ಷಣವಲ್ಲ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಬೇಕು. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅರಿವು ಮೂಡಬೇಕು. ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ ಎಂದರು.
ಹೆಚ್ಚು ಓದಿದ ಮಾತ್ರಕ್ಕೆ ಬಲಾಡ್ಯ ದೇಹದಾಡ್ಯತೆ ಹೊಂದಿದ ಮಾತ್ರಕ್ಕೆ ವ್ಯಕ್ತಿತ್ವದಲ್ಲಿ ಪರಿಪೂರ್ಣತೆ ಬರಲು ಸಾಧ್ಯವಿಲ್ಲ. ಒಳ್ಳೆಯ ಸಂಸ್ಕಾರ ಸಣ್ಣ ವಯಸ್ಸಿನಲ್ಲೇ ಮಕ್ಕಳಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಗಳು ಹೆಚ್ಚು ಉಪಯುಕ್ತವಾಗಿವೆ. ಮಕ್ಕಳು, ಪೋಷಕರು, ಅಧ್ಯಾಪಕರು ಪ್ರತಿಭಾ ಕಾರಂಜಿಗಳಲ್ಲಿ ಹೆಚ್ಚು ತೊಗಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಗಣೇಶ್‌ ವಹಿಸಿದ್ದರು. ಸಭೆಯಲ್ಲಿ
ಪಂಚಾಯ್ತಿ ಅಧ್ಯಕ್ಷರಾದ ಕವಿತಾ ಭಾಸ್ಕರ್, ಸದಸ್ಯರಾದ ಸುಂದರೇಶ್, ನಾಗರಾಜ, ಶ್ರೀನಿವಾಸ ಗೌಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು