7:14 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ…

ಇತ್ತೀಚಿನ ಸುದ್ದಿ

ನಾಗಾ ಸಾನಿಧ್ಯದ ಸ್ವಂತ ಜಮೀನನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್: ದಳವಾಯಿ ಕುಟುಂಬ ಫುಲ್ ಖುಷ್

22/08/2023, 16:26

ಮಂಗಳೂರು(reporterkarnataka.com): ಅಲ್ಲಿ ಇಲ್ಲಿ ನಾವು ಭೂದಾನ ಮಾಡಿದ ವಿಷಯ ಆಗಾಗ ಕೇಳುತ್ತಲೇ ಇರುತ್ತೇವೆ. ಈಗ ವಿಧಾನಸಭೆ ಸ್ಪೀಕರ್ ಅವರೇ ತನ್ನ ಜಮೀನಲ್ಲಿರುವ ನಾಗ ಸಾನಿಧ್ಯವನ್ನು ಉಚಿತವಾಗಿ ಅದರ ವಾರೀಸುದಾರರಿಗೆ ಬಿಟ್ಟು ಕೊಟ್ಟು ಸೌಹಾರ್ದತೆಯನ್ನು ಮತ್ತೊಮ್ಮೆ ಮೆರೆದಿದ್ದಾರೆ.
ಸ್ಪೀಕರ್ ಖಾದರ್ ಅವರ ಉದಾರ ಮನೋಭಾವದಿಂದ ದಳವಾಯಿ ಕುಟುಂಬ ಫುಲ್ ಖುಷಿಯಾಗಿದೆ. ಜತೆಗೆ ಖಾದರ್ ಅವರಿಗೂ ದೈವ ಕಾರ್ಯಕ್ಕೆ ಭೂದಾನ ಮಾಡಿದ ಸಂತೃಪ್ತಿ ತುಂಬಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಜಮೀನಿನಲ್ಲಿರುವ ನಾಗನ ಸಾನಿಧ್ಯದ ಜಾಗವನ್ನು ಅದರ ವಾರಸುದಾರರಿಗೆ ನೀಡಿದ್ದಾರೆ.
ಹಿರಿಯರ ಕಾಲದಲ್ಲಿ ಖಾದರ್ ಅವರ ಜಮೀನು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು. ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು. ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದಿದ್ದಾರೆ. ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜ್ರಂಬಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ಈ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು