ಇತ್ತೀಚಿನ ಸುದ್ದಿ
ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ
15/05/2024, 21:35
ಮಂಗಳೂರು(reporterkarnataka.com): ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಬುಧವಾರ
ನಾಮಪತ್ರ ಸಲ್ಲಿಸಿದರು.
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು.
ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಪ್ಪ ಕಲ್ಮನಿ, ಪ್ರಮುಖರಾದ ಮನಮೋಹನ್ ಬಳ್ಳಡ್ಕ, ರಂಜಿತ್ ಪಿ.ಜೆ., ಡಾ.ಅರುಣ್ ಕುಮಾರ್ ಮತ್ತು ನಿತೇಶ್ ಸಾಲಿಯಾನ್ ಈ ಸಂದರ್ಭ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಾ.ಎಸ್.ಆರ್.ಹರೀಶ್ ಆಚಾರ್ಯ, ರಾಜಕೀಯ ಪಕ್ಷಗಳು ಕರಾವಳಿ ಜಿಲ್ಲೆಗಳ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದಲ್ಲಿ ಯಾವುದೇ ಪ್ರಾತಿನಿಧ್ಯ ನೀಡದೇ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದರಿಂದ ಕರಾವಳಿ ಭಾಗದ ಇರುವಿಕೆಯ ಅಸ್ತಿತ್ವವನ್ನೇ ನಿರಾಕರಿಸಿದಂತಾಗಿದೆ. ಆದುದರಿಂದ ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಪ್ರತೀಕವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು.