ಇತ್ತೀಚಿನ ಸುದ್ದಿ
ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯ
24/09/2024, 20:55
ಸುರತ್ಕಲ್(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿದ್ದು,ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಹೈ ಕೋರ್ಟ್ ಎತ್ತಿ ಹಿಡಿದಿರುವುದು ನ್ಯಾಯಕ್ಕೆ ಸಂದ ಜಯವಾಗಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಆಗ್ರಹಿಸಿದ್ದಾರೆ.
ಸಚಿವ ಸಂಪುಟದ ಸಚಿವರಲ್ಲಿ ಓರ್ವರು ಈಗಾಗಲೇ ಜೈಲು ಸೇರಿದ್ದಾರೆ. ವಿವಿಧ ಹಗರಣದಲ್ಲಿ ಹಲವು ಮಂದಿ ಸಚಿವರು ಭಾಗಿಯಾಗಿದ್ದು ನಿಮ್ಮ ದಾರಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿರುವ ಅವರು, ಮತ ಹಾಕಿರುವ ಜನರ ವಿಶ್ವಾಸಕ್ಕೆ ದ್ರೋಹ ಬಗೆದಿರುವ ಕಾಂಗ್ರೆಸ್ ಸರಕಾರ ಅಧಿಕಾರ ಕಳೆದುಕೊಳ್ಳುವ ಹಂತದಲ್ಲಿದೆ ಎಂದು ಹೇಳಿದ್ದಾರೆ.