ಇತ್ತೀಚಿನ ಸುದ್ದಿ
ನಂಜನಗೂಡು ಹುಲ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸೋಲು
13/12/2024, 19:38
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ ಹಾಗೂ ಉಪಾಧ್ಯಕ್ಷ ಲೋಕೇಶ್ ವಿರುದ್ಧ ಮಾಡಲಾಗಿದ್ದ ಅವಿಶ್ವಾಸ ನಿರ್ಣಯ ಗೊತ್ತುವಳಿಗೆ ಸೋಲುಂಟಾಗಿದೆ.
ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯದ ಸಭೆ
ಇಂದು ನಡೆದ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಯಾವೊಬ್ಬ ಸದಸ್ಯರೂ ಹಾಜರಾಗದ ಕಾರಣ ಅವಿಶ್ವಾಸಕ್ಕೆ ಸೋಲಾಗಿದೆ
ಒಟ್ಟು 22 ಮಂದಿ ಸದಸ್ಯಬಲ ಹೊಂದಿರುವ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರಿಯಾಗಿ ಆಡಳಿತ ನಡೆಸದೆ ಹಾಗೂ ಸದಸ್ಯರುಗಳನ್ನು ವಿಶ್ವಾಸಕ್ಕೆ ಪಡೆಯದೆ ಇದ್ದು ಅವರ ಆಡಳಿತ ವೈಫಲ್ಯದಿಂದಾಗಿ 19 ಮಂದಿ ಸದಸ್ಯರು ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಸಹಿ ಮಾಡಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನಲೆ ಇಂದು ನಡೆದ ಸಭೆಯಲ್ಲಿ ಯಾವೊಬ್ಬ ಸದಸ್ಯರು ಹಾಜರಾಗದ ಕಾರಣ ಅವಿಶ್ವಾಸಕ್ಕೆ ಸೋಲುಂಟಾಗಿ ಹಾಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೇ ಮುಂದುವರೆಯುವಂತಾಗಿದೆ.
ಬದಲಾದ ಪರಿಸ್ಥಿತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಹಿ ಮಾಡಿದ್ದ ಕೆಲವು ಸದಸ್ಯರೆ ಅವರ ಪರ ಬ್ಯಾಟಿಂಗ್ ಮಾಡಿದ ಕಾರಣ ಇಂದಿನ ಸಭೆ ವಿಫಲವಾಗಿದೆ. ಉಪ ವಿಭಾಗಾಧಿಕಾರಿ ರಕ್ಷಿತ್ ಮಾತನಾಡಿ ಅವಿಶ್ವಾಸ ನಿರ್ಣಯದ ಸೋಲಿನ ಬಗ್ಗೆ ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕಾರ್ಯದರ್ಶಿಗಳು ಹಾಜರಿದ್ದರು.