7:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಕಲಿ ವೀಡಿಯೊ ಪ್ರಸಾರದ ಭೀತಿ: ಕೋರ್ಟ್ ಮೊರೆ ಹೋದ ಕೇಂದ್ರ ಸಚಿವ ಸದಾನಂದ ಗೌಡ

03/07/2021, 07:56

ಬೆಂಗಳೂರು(reporterkarnataka news): ನಕಲಿ ವೀಡಿಯೊ ಪ್ರಸಾರ ಮಾಡಿ ತನ್ನ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆಯಿದೆ ಎಂಬ ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮ್ಮ ಕುರಿತು ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ.

ಕೇಂದ್ರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆಯಿದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಸಚಿವರು ತಿಳಿಸಿದ್ದಾರೆ.

ಈ ಮುನ್ನ ಒಬಾಮಾ ಮತ್ತು ಕ್ವೀನ್ ಎಲಿಜಬೆತ್ ಅವರ ನಕಲಿ ವಿಡಿಯೋ ಮಾಡಿ ಪ್ರಸಾರ ಮಾಡಲಾಗಿತ್ತು. ಇಂಥ ವಿಡಿಯೋ ಪ್ರಸಾರವಾದರೆ ಚಾರಿತ್ರ್ಯವಧೆಯಾಗಲಿದೆ. ಘನತೆಗೆ ಧಕ್ಕೆ ಉಂಟಾಗಲಿದೆ ಎಂದು ಡಿ.ವಿ. ಸದಾನಂದಗೌಡ ಕೋರ್ಟ್ ಮೊರೆ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು