9:31 AM Saturday1 - February 2025
ಬ್ರೇಕಿಂಗ್ ನ್ಯೂಸ್
ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ;… ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ… ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ… ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ… ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ… ಬಿಜೆಪಿ 12ನೇ ಶತಮಾನದಲ್ಲಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿತ್ತು: ಸಚಿವ…

ಇತ್ತೀಚಿನ ಸುದ್ದಿ

ನಕ್ಸಲ್ ರವೀಂದ್ರ ಇಂದು ಶರಣಾಗತಿ: ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಮುಖ್ಯವಾಹಿನಿಗೆ

01/02/2025, 09:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ.
ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು.ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.
 
ರವೀಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ನಕ್ಸಲ್ ಶರಣಾಗತಿ ಸಮಿತಿ ಸದಸ್ಯ ಕೆ.ಪಿ.ಶ್ರೀಪಾಲ್ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯ ಕೆ.ಎಲ್.ಅಶೋಕ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು