12:33 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನಳಿನ್‌ ಹೇಳಿಕೆಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಮಾಜಿ ಸಿಎಂ ಯಡಿಯೂರಪ್ಪ ಕೂಡ ವಿರೋಧ

20/10/2021, 21:54

ಬೆಂಗಳೂರು/ ವಿಜಯಪುರ (reporterkarnata.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡ್ರಗ್ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು.

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಳಿನ್ ಅವರ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದರು. ಆರೆಸ್ಸೆಸ್ ಸಂಸ್ಥೆ ಇಂತಹ ನಾಯಕರನ್ನೇ ಸೃಷ್ಟಿಮಾಡುತ್ತದೆ ಎಂದು ಲೇವಡಿ ಮಾಡಿದರು. ವಿವಾಹಿತ ಮಹಿಳೆಯೊಬ್ಬರ ಜತೆ ನಳಿನ್ ಸಂಬಂಧ ಕುರಿತು ಮಹಿಳೆಯ ಪತಿ ಪ್ರಮುಖ ಸುದ್ದಿ ವಾಹಿನಿಯೊಂದರಲ್ಲಿ ಈ ಹಿಂದೆ ಮಾಡಿದ ಆರೋಪದ ಬಗ್ಗೆ ಪ್ರಸ್ತಾಪಿಸಿದರು. 

ನಳಿನ್ ಹೇಳಿಕೆಗೆ ಸ್ವತಃ ಬಿಜೆಪಿಯಿಂದಲೇ ವಿರೋಧ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್‌ ಎಂದು ಹೇಳಿರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನಳಿನ್‌ ಕುಮಾರ್‌ ಕಟೀಲ್‌ ಅವರು ರಾಹುಲ್‌ ಗಾಂಧಿ ಅವರನ್ನು ಡ್ರಗ್‌‌ ಪೆಡ್ಲರ್‌ ಎಂದು ಕರೆದಿರುವುದು ಸರಿಯಲ್ಲ. ಈ ರೀತಿಯಾಗು ಅಗೌರವದಿಂದ ಮಾತನಾಡುವುದು ಸೂಕ್ತವಲ್ಲ” ಎಂದಿದ್ದಾರೆ.

“ಯಾರೂ ಯಾರ ಬಗ್ಗೆಯೂ ಈ ರೀತಿಯಾಗಿ ಅಗೌರವದಿಂದ ಮಾತನಾಡಬಾರದು. ರಾಹುಲ್‌ ಗಾಂಧಿ ಬಗ್ಗೆ ಗೌರವವಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು