8:27 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ

ಇತ್ತೀಚಿನ ಸುದ್ದಿ

ನಳಿನ್ ನೇತೃತ್ವದಲ್ಲೇ ಜಿಪಂ, ತಾಪಂ, ಪಾಲಿಕೆ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

28/08/2021, 11:06

ಬೆಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಎರಡು ವರ್ಷ ಪೂರೈಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಉಪ ಚುನಾವಣೆಗಳು ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಹಳಷ್ಟು ಸಂಘಟಿತ ವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ಕಟೀಲ್  ಅವರು ಇಡೀ ರಾಜ್ಯವನ್ನ 5 ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರಕಾರ ರಚನೆಯಲ್ಲಿ ಬಹಳ ಮಹತ್ವ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಮುಂಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಹೇಳಿದರು

ಇತ್ತೀಚಿನ ಸುದ್ದಿ

ಜಾಹೀರಾತು