9:48 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ನಳಿನ್ ಗೆ ಕಾಂಗ್ರೆಸಿಗರ ಬದ್ಧತೆ ಗೊತ್ತಿದೆ, ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು: ಖಾದರ್ ಲೇವಡಿ

07/12/2021, 17:50

ಮಂಗಳೂರು(reporterkarnataka.com): ಕಾಂಗ್ರೆಸಿಗರ ಬದ್ಧತೆ, ಶಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿದೆ. ಈ ಹಿಂದೆ ಕಟೀಲ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದವರು. ಎನ್ ಎಸ್ ಯುಐ ನಲ್ಲಿ ವಿನಯ್ ಸೊರಕೆ ಪರ ದುಡಿದಿದ್ದರು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.

ಖಾದರ್ ಮತ್ತು ರಮಾನಾಥ ರೈ ಬಿಟ್ಟು ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ ಎಂದು ಹೇಳಿಕೆ ನೀಡಿದ್ದ ನಳಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ.ಖಾದರ್, ಕಟೀಲ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದರೆ ಒಳ್ಳೆಯದು ಎಂದಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರ ಚರಿತ್ರೆಯನ್ನು ಮೊದಲು ನೋಡಲಿ. ಬಿಜೆಪಿಯಲ್ಲಿ ಅವರ ಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ. ಕಾಂಗ್ರೆಸ್ ಮುಕ್ತಗೊಳಿಸುವ ಅನಗತ್ಯ ಯೋಜನೆ ಬೇಡ. ಈಗಾಗಲೇ ಬಿಜೆಪಿ ಸೇರಿದವರ ಪರಿಸ್ಥಿತಿ ಅತಂತ್ರವಾಗಿರುವಾಗ ನಮ್ಮ ಪಕ್ಷದವರ ಬಗ್ಗೆ ಕಟೀಲ್ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು