11:35 PM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ನಮಗೆ ಮಾರ್ಗದರ್ಶನ ಮಾಡಲು ಅಣ್ಣಾಮಲೈ ದೊಡ್ಡ ಹೀರೋನಾ?: ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

29/06/2023, 19:16

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಪಕ್ಷದೊಳಗಿನ ಎರಡು ಬಣಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಇದೀಗ ಹೊನ್ನಳ್ಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ರಂಗಪ್ರವೇಶ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ಅಸಮಾಧಾನ ಹೊರಗೆಡಹಿದ್ದಾರೆ.
ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿರುವುದೇ ಪಕ್ಷದ ಹೀನಾಯ ಸೋಲಿಗೆ ಕಾರಣ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವರು ನಮಗೆ ಪಾಠ ಮಾಡಲು ಬರುತ್ತಾರೆ. ತಮಿಳುನಾಡಿನಿಂದ ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡುತ್ತಾರೆ. ಏನು ಅಣ್ಣಾಮಲೈ ದೊಡ್ಡ ಹೀರೋನಾ? ಎಂದು ಮಾಜಿ ಸಚಿವರಾದ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಸೆಲ್ಯೂಟ್ ಹೊಡೆಯುತ್ತಿದ್ದವರಿಂದ ಬಸವರಾಜ ಬೊಮ್ಮಾಯಿ ಅವರು ಹೇಳಿಸಿಕೊಳ್ಳಬೇಕಾದ ಅನಿವಾರ್ಯತೆ, ಮುಜುಗರ ಸೃಷ್ಟಿಸಿದ್ದರು. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ? ಎಂದು ಅವರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು