ಇತ್ತೀಚಿನ ಸುದ್ದಿ
ನಮಗೋತ್ತಿಲ್ಲ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು: ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್
11/12/2022, 19:43

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ನಮಗೋತ್ತಿಲ್ಲಾ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಎಂದು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.
ಅಥಣಿ ಶಾಸಕ ಮಹೇಶ ಕುಮಠಳ್ಳಿ ಜತೆ ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತರು ರೋಸಿ ಹೋಗಿದ್ದಾರೆ.
ಗಡಿ ರೈತರಿಗೆ ಪದೇ ಪದೇ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಸಾವಿರಾರು ಎಕರೆ ಬೆಳೆ ನೀರಿಲ್ಲದೆ ಕಮರುತ್ತಿವೆ.
ಇದೇ ಸಂದರ್ಭದಲ್ಲಿ ಸಮಸ್ಯೆ ತೊಡಿಕೊಂಡ ರೈತರು, ದಿನಕ್ಕೆ 7 ಗಂಟೆ ವಿದ್ಯುತ್ ನೀಡುವಂತೆ ರೈತರು ಮನವಿ ಮಾಡಿದರು.
ಹೆಸ್ಕಾಂ ಅಧಿಕಾರಿಗಳಿಗೆ ರೈತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ! ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.