ಇತ್ತೀಚಿನ ಸುದ್ದಿ
ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ
26/12/2025, 19:41
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕುಟುಂಬದೊಂದಿಗೆ ಕಾರಿನಲ್ಲಿ ಪ್ರವಾಸ ತೆರಳುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಾರಿಗೆ ‘ಪೊಲೀಸ್’ ನಾಮಫಲಕ ಹಾಕಿಕೊಂಡಿದ್ದಕ್ಕೆ ಸ್ಥಳೀಯ ಪೊಲೀಸರು ಅವರಿಗೆ ದಂಡ ವಿಧಿಸಿದ ಘಟನೆ ಕೊಟ್ಟಿಗೆಹಾರದ ಚೆಕ್ ಪೋಸ್ಟ್ನಲ್ಲಿ ನಡೆದಿದೆ.
ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಖಾಸಗಿ ವಾಹನದ ಮುಂಭಾಗಕ್ಕೆ ‘ಪೊಲೀಸ್’ ಎಂಬ ನಾಮ ಫಲಕ ಹಾಕಿ ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬದೊಂದಿಗೆ ಪ್ರವಾಸ ತೆರಳುತ್ತಿದ್ದರು. ಕೊಟ್ಟಿಗೆಹಾರದ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಹಾಗೂ ಸಿಬ್ಬಂದಿ ಆ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
ಕರ್ತವ್ಯದಲ್ಲಿ ಇಲ್ಲದ ಸಂದರ್ಭದಲ್ಲಿ ಪೊಲೀಸ್ ನಾಮ ಫಲಕ ಅಳವಡಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ನಿಯಮ ಉಲ್ಲಂಘಿಸಿದ ಅಧಿಕಾರಿಗೆ ದಂಡ ವಿಧಿಸಿ, ಫಲಕವನ್ನು ತೆರವು ಮಾಡಿ ಕಳುಹಿಸಲಾಯಿತು ಎಂದು ಮೂಲಗಳು ತಿಳಿಸಿವೆ.












