11:40 PM Monday23 - December 2024
ಬ್ರೇಕಿಂಗ್ ನ್ಯೂಸ್
ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ… ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

ಇತ್ತೀಚಿನ ಸುದ್ದಿ

ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ

15/09/2024, 12:23

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಜರುಗಿದ ನಮ್ಮ‌ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ವನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ , ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಸರಕಾರಿ ಶಾಲೆಗಳನ್ನು ಅಭಿವೃದ್ಧಿ‌ಪಡಿಸಲು ಸರಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದರು.
ರಾಜ್ಯದಲ್ಲಿ ಸರಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಅಂದಾಜು 56 ಲಕ್ಷ ವಿಧ್ಯಾರ್ಥಿಗಳಿದ್ದು ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಳೆಜುಗಳಲ್ಲಿ ಅಂದಾಜು ಒಂದು ಕೋಟಿ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ.
ಕಳೆದ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಗೆ ಮೂರು ಬಾರಿ ಅವಕಾಶ ನೀಡಲಾಗಿದ್ದು, ಈ ಅವಕಾಶದ ಸದುಪಯೋಗ ಪಡೆದುಕೊಂಡ ಎಂಬತ್ತೇರೆಡು ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಇಂದು ಕಾಲೇಜುಗಳಿಗೆ ಪ್ರವೇಶ ಪಡೆದಿರುತ್ತಾರೆ.
ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವದು ಸರಕಾರದ ಧ್ಯೇಯವಾಗಿದ್ದು, ಈ ಹಿನ್ನಲೆಯಲ್ಲಿ ಅಜೀಂ ಪ್ರೇಮಜಿ‌ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ‌ ನೀಡಲಾಗುತ್ತಿರುವ‌ ಮೊಟ್ಟೆಯನ್ನು ವಾರದ ಆರು‌ ದಿನಗಳ ಕಾಲ ವಿತರಿಸುವ ಕಾರ್ಯಕ್ರಮಕ್ಕೆ ಸೆ. 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದರು.
ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ‌ ಪ್ರಾರಭದಿಂದಲೇ ನೀಡುವ ಸದುದ್ದೇಶದೊಂದಿಗೆ 45 ಸಾವಿರ ಅತಿಥಿ ಶಿಕ್ಷಕರಿಗೆ ಶಾಲಾ ಪ್ರಾರಂಭಕ್ಕೆ ಮುನ್ನವೆ ನೇಮಕಾತಿ ಆದೇಶ ಪ್ರತಿಗಳನ್ನು ವಿತರಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಕಿ ರಾಜ್ಯ ಸರಕಾರದಿಂದ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ 1008 ಎಲ್.ಕೆ.ಜಿ. ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗಿದ್ದು ಕ್ರಮೇಣ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ವಹಿಸಲಾಗುವದು ಎಂದರು.
ಸರಕಾರಿ ಶಾಲೆಗಳಲ್ಲಿ‌ ಹಾಗೂ ಗ್ರಾಮೀಣ ಭಾಗದಲ್ಲಿನ ವಿಧ್ಯಾರ್ಥಿಗಳು ಉನ್ನತ ಹುದ್ದೇ ಸ್ಥಾನ ಮಾನವನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಸರಕಾರದಿಂದಲೇ ನೀಟ್, ಸಿ.ಇ.ಟಿ ಕೋಚಿಂಗ್ ನೀಡುವ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ತಾವು ಕಲಿತ ಸಿದ್ಧರಾಮನಹುಂಡಿಯಲ್ಲಿನ ಸರಕಾರಿ ಶಾಲೆಗೆ ಹತ್ತು ಲಕ್ಷ ರೂ.ಗಳನ್ನು ತಮ್ಮ ಸಂಬಳದಿಂದ ದಾನ ನೀಡಿದ್ದು ಎಲ್ಲ ಶಾಸಕ ಸಚಿವರುಗಳಿಗೆ ಪ್ರೇರಣೆಯಾಗಿದೆ. ದಾನಿಗಳು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಸಹಾಯ ಮಾಡಿದಲ್ಲಿ ನಮ್ಮ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ.
ಶಿಕ್ಷಕರು ತಮ್ಮ ಶಾಲೆಗೆ ಒಂದು ತಿಂಗಳ ಸಂಬಳವನ್ನು ದಾನವಾಗಿ ನೀಡಿದಲ್ಲಿ ಇತರರು ಪ್ರೇರಪಣೆಗೊಂಡು ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ರಾಜ್ಯದಲ್ಲಿ ಉತ್ತಮ ಶಿಕ್ಷಕರು ನಮ್ಮ ಸರಕಾರಿ ಶಾಲೆಯಲ್ಲಿದ್ದು ಪಾಲಕರು ತಮ್ಮ ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸುವದರ ಜೊತೆಗೆ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರಿತುಕೊಂಡಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ ಎಂದು ಸಚಿವರಾದ ಮಧು ಬಂಗಾರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ‌ ಮಹತ್ತರ ಬದಲಾವಣೆ ತರುವಲ್ಲಿ ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ.‌ ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವದರ ಮೂಲಕ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನೀಡುವದೇ ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದರು.
ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು‌ ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸಿಮಿತವಾಗದೇ ಪ್ರತಿಯೊಬ್ಬರು ಕೈಜೋಡಿಸಿದಲ್ಲಿ ಈ ಕಾರ್ಯಕ್ರಮ‌ವನ್ನು ಯಶಸ್ವಗೊಳಿಸಬಹುದಾಗಿದೆ.‌ ನಮ್ಮ‌‌ ಶಾಲೆ ನಮ್ಮ‌ಜವಾಬ್ದಾರಿ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೆ ಪಾಲಕರ, ಶಿಕ್ಷಕರ ಪಾತ್ರ ಮಹತ್ವಾದಾಗಿದ್ದು, ಶಿಕ್ಷಣದ ಜೊತೆಗೆ ತಾವು ಕಲಿತ ಶಾಲೆ, ತಮ್ಮ ಗ್ರಾಮದ ಬಗ್ಗೆ ಅಭಿಮಾನ ಹೊಂದುವಂತಹ ಶಿಕ್ಷಣ ನೀಡುವದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.

ಯಾವ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆ ಗಂಟೆಗಳು ಗರ್ಜಿಸುತ್ತವೆಯೊ ಅಂತಹ ದೇಶಗಳು ಪ್ರಗತಿಪರ ಹೊಂದಿದಂತಹ ದೇಶಗಳಾಗಿವೆ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ನುಡಿಗಳನ್ನು ಸ್ಮರಿಸಿದ ಅವರು ಶಾಲಾ ಕಟ್ಟಡಗಳ ದುರಸ್ತಿ‌ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಸರಕಾರದ ಜೊತೆಗೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಮುಂದೆ‌ ಬರುವುದರ ಜೊತೆಗೆ ಅವರು ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಪಣ ತೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿದ್ದ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮಾತನಾಡಿ, ಇದೊಂದು ಅರ್ಥಪೂರ್ಣವಾದಂತಹ ಕಾರ್ಯಕ್ರಮವಾಗಿದೆ. ಸಮಾಜ, ದೇಶ ಬೆಳೆಯಬೆಕಾದರೆ ಸರಕಾರ ಸ್ವಾಮ್ಯದ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಸರಕಾರ ಸಾಕಷ್ಟು ಮಹತ್ವಾಕಾಂಕ್ಷೆಗಳನ್ನಿಟ್ಟುಕೊಂಡು ಅನೇಕ ಯೋಜನೆಗಳನ್ನು ರೂಪಿಸುತ್ತದೆ. ಈ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು, ಸಾರ್ವಜನಿಕರು ಇದರಲ್ಲಿ‌ ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು ಎಂದರು.


ಶಾಸಕರುಗಳಾದ ಎಂ.ನರೇಂದ್ರಸ್ವಾಮಿ ಹಾಗೂ ಬಸವರಾಜ ಶಿವಣ್ಣವರ ಅವರು, ನಮ್ಮ ಶಾಲೆ ನಮ್ಮ ಜವಾಬ್ದಾರಿ ಕುರಿತು ಮಾತನಾಡಿ ಹಳೆಯ ವಿಧ್ಯಾರ್ಥಿಗಳು ತಾವು ಕಲಿತ ಶಾಲೆಯ ಅಭಿವೃದ್ಧಿ ಹಾಗೂ ಏಳ್ಗೆಗಾಗಿ ಕೈಜೋಡಿಸುಬದು ಇದರ ಉದ್ದೇಶವಾಗಿದೆ. ರಾಷ್ಟ್ರದ ಪ್ರಗತಿಯನ್ನು ಅಳೆಯುವದು ಶಿಕ್ಷಣ ಮುಇಲಕ ಗ್ರಾಮೀಣ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಆರೋಗ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದರು

ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅವರು ಮಾತನಾಡಿ, ಶಿಕ್ಷಕರಿಗೆ ಹಳೇ‌ಪಿಂಚಣಿ ಯೋಜನೆ ಜಾರಿ, ಏಳನೆ ತರಗತಿ ನಂತರ ಎಂಟು, ಒಂಭತ್ತನೇ ತರಗತಿಗಳಿಗೆ ಅನುಮತಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ‌ ಮಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಶಾಸಕರುಗಳಾದ ಆಸೀಫ್(ರಾಜು)ಸೇಠ, ವಿಠ್ಠಲ ಹಲಗೇಕರ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಹಲಗಾ, ಬಸ್ತವಾಡ ಗ್ರಾ.ಪಂ. ಅಧ್ಯಕ್ಷರುಗಳಾದ ಲಕ್ಷ್ಮಿ ಗಜಪತಿ, ಮಹಾದೇವಿ ಪಾಟೀಲ, ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿ ರಾಕೇಶ್ ಕುಮಾರ ಸಿಂಗ್, ಆಯುಕ್ತೆ ಶ್ರೀಮತಿ ಕಾವೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ ಶಿಂಧೆ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ, ಕ.ಪ್ರೌ.ಶಿ.ಪ.‌ಮಂಡಳಿ ಕಾರ್ಯದರ್ಶಿಗಳಾದ ಸಕ್ರೆಪ್ಪಗೌಡ ಬಿರಾದಾರ, ಸಿ.ಟಿ.ಇ.‌ಪ್ರಾಚಾರ್ಯ ಎನ್.ಶ್ರೀಕಂಠ, ಬೆಳಗಾವಿ ಶಾಲಾ‌ ಶಿಕ್ಷಣ ಇಲಾಖೆ ಉಪನಿರ್ದೆಶಕಿ ಲೀಲಾವತಿ ಹಿರೇಮಠ, ಚಿಕ್ಕೋಡಿ ಉಪನಿರ್ದೆಶಕ ಬಿ.ಎ.ಮೇಕಲಮರಡಿ, ಡಯಟ್ ಉಪನಿರ್ದೆಶಕರಾದ ಬಸವರಾಜ ನಾಲತವಾಡ ಅವರುಗಳು ಉಪಸ್ಥಿತರಿದ್ದರು.

ಇದೇ ಸಂಧರ್ಬದಲ್ಲಿ ನಮ್ಮ‌ ಶಾಲೆ‌ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಅಂಗಾವಗಿ‌ ತಾವು ಕಲಿತ ಶಾಲೆಗಳಿಗೆ ದಾನ ಮಾಡಿದಂತಹ ದಾನಿಗಳಿಗೆ ಸನ್ಮಾನಿಸಲಾಯಿತು.
****

ಇತ್ತೀಚಿನ ಸುದ್ದಿ

ಜಾಹೀರಾತು