10:08 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ನಮ್ಮದು ಪೀಪಲ್ಸ್‌ ಪಾಲಿಟಿಕ್ಸ್‌, ಜನರ ಸಮಸ್ಯೆಗಳಿಗೆ ಪರಿಹಾರವೇ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

28/04/2022, 10:16

ಮಂಗಳೂರು(reporterkarnataka.com): ಕಳೆದ ಹಲವು ವರ್ಷಗಳಿಂದ ಎದುರಾಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆ ಹರಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ತಾಲೂಕು ಆಡಳಿತ ಸೌಧವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿ, ಮೂಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಈ ಸಮಸ್ಯೆಗೆ ಅಂತ್ಯ ಕಾಣಿಸಲು ರಾಜ್ಯ ಸರ್ಕಾರವು ಸುಮಾರು 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡುವ ತೀರ್ಮಾನ‌ ಮಾಡಿದೆ, 

ಡೀಮ್ಡ್ ಫಾರೆಸ್ಟ್‌ನಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆ ಬಗೆಹರಿಸಲು ಈ ಪ್ರಯತ್ನ ಮಾಡಲಾಗುತ್ತಿದೆ ಎಂದ ಅವರು, ಅಭಿವೃದ್ಧಿ ಕೆಲಸ ಮಾಡಲು 24 ಗಂಟೆ ಸಾಕಾಗುತ್ತಿಲ್ಲ. ನಮ್ಮದು ಪೀಪಲ್ಸ್‌ ಪಾಲಿಟಿಕ್ಸ್‌, ಜನರ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ಅದೇ ನಮ್ಮ ರಾಜಕಾರಣ ಎಂದರು.

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡಲು ಕೃಷಿ ಅಭಿವೃದ್ಧಿ ಬ್ಯಾಂಕ್ ಸ್ಥಾಪಿಸಲಾಗಿದೆ, ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಲ್ಲಿ ಈವರೆಗೆ 7 ಲಕ್ಷ ಮಕ್ಕಳಿಗೆ ಅನುಕೂಲವಾಗಿದ್ದು, ಈ ಬಾರಿ 15 ಲಕ್ಷ ಮಕ್ಕಳಿಗೆ ಇದರ ಅನುಕೂಲ ಮಾಡಿಕೊಡಲಾಗುವುದು, 22 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಲಾಗಿದೆ ಮುಂದಕ್ಕೆ 32 ಲಕ್ಷ ರೈತರಿಗೆ ಸಾಲ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. 5 ಲಕ್ಷ ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಸಬಲತೆಗೆ 1.5 ಲಕ್ಷ ರೂ., ಮೀನುಗಾರರಿಗೆ ಸಬ್ಸಿಡಿ ಡೀಸೆಲ್‌ ಹೆಚ್ಚಳ, 100 ಆಳ ಸಮುದ್ರ ಮೀನುಗಾರಿಕಾ ಬೋಟ್‌ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಇಂಧನ, ಕನ್ನಡ ಮತ್ತು ‌ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿಯವರು ರಾಜ್ಯಕ್ಕೆ  ಬಹಳಷ್ಟು ಕೊಡುಗೆ ನೀಡಿದ್ದಾರೆ. ಡೀಮ್ಡ್‌ ಫಾರೆಸ್ಟ್‌, ರೈತರ ಕುಮ್ಕಿ ಹಕ್ಕಿನ ಸಮಸ್ಯೆಯನ್ನು ಪರಿಹರಿಸುವಲ್ಲಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ವಸತಿ ಸಚಿವ ವಿ. ಸೋಮಣ್ಣ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ನಾಗೇಶ್, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ  ಎಸ್. ಅಂಗಾರ, ಹಿಂದುಳಿದ‌ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿ, ಶಾಸಕರಾದ ಉಮನಾಥ್ ಕೋಟ್ಯಾನ್,  ವೇದವ್ಯಾಸ ಕಾಮತ್,  ಹರೀಶ್ ಪೂಂಜ, ರಾಜೇಶ್ ನಾಯ್ಕ್, ರಘುಪತಿ ಭಟ್, ವಿವಿಧ ನಿಗಮಗಳ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ನಿತಿನ್ ಕುಮಾರ್, ಸಂತೋಷ್ ಕುಮಾರ್ ರೈ, ರವೀಂದ್ರ ಶೆಟ್ಟಿ ಉಳಿದೊಟ್ಟು, ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ಮೇಘನಾಥ ಶೆಟ್ಟಿ, ಜಿ.ಪಂ.ಸಿಇಒ ಡಾ.ಕುಮಾರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ವಾಗತಿಸಿದರು. ಕೇಶವ ಬಂಗೇರ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು