3:17 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ನಮ್ಮಲ್ಲಿ ಅಭಿವೃದ್ಧಿಯ ಚಿಂತನೆ ಇರಲಿ, ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು: ಮಾಜಿ ಸಿಎಂ ಜಗದೀಶ್ ಶೆಟ್ಟರ್

26/08/2023, 23:06

ಉಡುಪಿ(reporterkarnataka.com): ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು.

ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.
ಉಡುಪಿಯಲ್ಲಿ ಶನಿವಾರ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ ಮಾಲಿನ್ಯ ನಿಯಂತ್ರಿತ ಕೈಗಾರೀಕರಣ ಹಾಗೂ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಬ್ಬಳ್ಳಿ ಅಂಕೋಲ ರೈಲು ಮಾರ್ಗ ಅಭಿವೃದ್ಧಿಯಾಗಬೇಕಾಗಿದೆ. ಬೇಲಿಕೇರಿ ಬಂದರು ಅಭಿವೃದ್ಧಿ ಬಗ್ಗೆ ಕೂಡ ಕ್ರಮ ಆಗಬೇಕಾಗಿದೆ ಎಂದು ಶೆಟ್ಟರ್ ನುಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ಅವರು ಮಾತನಾಡಿ ಮಾತನಾಡಿ, ಸರಕಾರ ವ್ಯಾಪಾರ , ವ್ಯವಹಾರ , ಉದ್ದಿಮೆ ನಡೆಸಬಾರದು. ಅವುಗಳಲ್ಲಿ ಖಾಸಗಿ ಅವರಿಗೆ ಮುಕ್ತ ಅವಕಾಶ ಕೊಡಬೇಕು. ಸರಕಾರದ್ದು ಪ್ರಜಾ ಕಲ್ಯಾಣ ಕೆಲಸದ ಉದ್ದೇಶ ಮಾತ್ರ ಇರಬೇಕು ಎಂದು ನುಡಿದರು.
ಅಭಿವೃದ್ಧಿಯ ಸಂದರ್ಭದಲ್ಲಿ ಯಾವುದೇ ಸಂಘಟನೆಯವರು ವಿರೋಧಕ್ಕಾಗಿ ವಿರೋಧ ಮಾಡಬಾರದು ಎಂದರು .
ಸಣ್ಣ ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಸರಕಾರ ಉತ್ತೇಜನ ನೀಡಬೇಕೆಂದು ಅವರು ಮನವಿ ಮಾಡಿದರು .

ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿ , ಅಭಿವೃದ್ಧಿ ಸಂದರ್ಭದಲ್ಲಿ ಪರಿಸರ ಕಾಳಜಿ ವಹಿಸಬೇಕು. ಯಾವುದೇ ಅಭಿವೃದ್ಧಿಯು ಜನರ ಬದುಕಿಗೆ ಹಾನಿ ತರಬಾರದು ಹಾಗೂ ಪರಿಸರಕ್ಕೂ ಹಾನಿ ಎಸಗಬಾರದು ಎಂದು ಹೇಳಿದರು.
ಈ ಭೂಮಿ ನಮಗೆ ಹಾಗೂ ನಮ್ಮ ಮಕ್ಕಳಿಗೆ ಮಾತ್ರವಲ್ಲ ಇನ್ನೂ ಮುಂದಿನ ಪೀಳಿಗೆಗೂ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಖಾದರ್ ನುಡಿದರು .
ಜಯಶ್ರೀಕೃಷ್ಣ ಪರಿಸರ ಸಮಿತಿಯವರು ಕರಾವಳಿ ಹಾಗೂ ರಾಜ್ಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ನೀಡಿದ ನೀಲನಕ್ಷೆಯ ವರದಿಯನ್ನು ಸರಕಾರದ ಮಟ್ಟದಲ್ಲಿ ತಜ್ಞರ ಸಮಿತಿಯ ಮೂಲಕ ಚರ್ಚೆ ನಡೆಸಲಾಗುವುದು ಎಂದು ಖಾದರ್ ಭರವಸೆ ನೀಡಿದರು .
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾಜಿ ಸಚಿವ ನಾಗರಾಜ ಶೆಟ್ಟಿ , ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿದರು . ಜಯಶ್ರೀಕೃಷ್ಣ ಪರಿಸರ ಸಮಿತಿಯ ಸ್ಥಾಪಕ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಡುಪಿ‌ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ , ಜಿಲ್ಲಾ ಬಿಜೆಪಿ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕೂರ್ ಸುರೇಂದ್ರ ಸಾಲ್ಯಾನ್ , ಉಪಾಧ್ಯಕ್ಷರಾದ ಜಗದೀಶ್ ಅಧಿಕಾರಿ, ರಾಮಚಂದ್ರ ಬೈಕಂಪಾಡಿ , ಕೋಶಾಧಿಕಾರಿ ತುಳಸಿದಾಸ್ ಅಮೀನ್ ಉಪಸ್ಥಿತರಿದ್ದರು.
ಸಮಿತಿಯ ಉಪಾಧ್ಯಕ್ಷ ನಿತ್ಯಾನಂದ ಕೋಟ್ಯಾನ್ ಸ್ವಾಗತಿಸಿದರು, ಮಾಧ್ಯಮ ವಕ್ತಾರ ದಯಾಸಾಗರ ಚೌಟ ಕಾರ್ಯಕ್ರಮ ನಿರ್ವಹಿಸಿದರು. ಸುರೇಂದ್ರ ಮೆಂಡನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು