10:37 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಪರ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಚಾರ

31/05/2024, 23:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಅವರ ಪರ ನಂಜನಗೂಡಿನಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು
ನಂಜನಗೂಡು ತಾಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ತೆರಳಿ ಮತದಾರ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಮತಪ್ರಚಾರಕ್ಕೆ ತೆರಳಿದ ಶಾಸಕರನ್ನು ಕೆಲವು ಶಾಲಾ ಮುಖ್ಯಸ್ಥರು ಮಾಲಾರ್ಪಣೆ ಮಾಡಿ ಶಾಲು ಹೊದಿಸಿ ಗೌರವಿಸಿದರು. ಬಳಿಕ ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ನಮ್ಮ ಪಕ್ಷದ ಅಭ್ಯರ್ಥಿ ಮರಿತಿಬ್ಬೆಗೌಡ ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಿಕ್ಷಕರಿಗೆ ಅನುಕೂಲ ವಾಗುವಂತಹ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ನಿಮಗೆಲ್ಲಾ ಅವರು ಚಿರಪರಿಚಿತರೆ ಆಗಿದ್ದು ಈಗ ಅವರು ಐದನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಾಗಿ ಮುಂದಿನ ಶಿಕ್ಷಕರುಗಳ ಭವಿಷ್ಯಕ್ಕಾಗಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.
ಮತ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಂಡರು.


ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಸಿಎಂ ಶಂಕರ್, ಶ್ರೀಕಂಠ ನಾಯಕ ದೊರೆಸ್ವಾಮಿ,ಗುರುಮಲ್ಲಪ್ಪ ಶಶಿರೇಖಾ, ಬಾಲರಾಜ್, ಶಿವಪ್ಪ ದೇವರು, ದೊರೆಸ್ವಾಮಿ ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು