12:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ವಿವಾದಿತ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ: ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರ ಘೋಷಣೆ

28/06/2024, 18:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಜೂನ್ 29 ಶನಿವಾರದಂದು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಾಲೂಕಿನ ವಿವಾದಿತ ಹಲ್ಲರೆ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವುದಾಗಿ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ತಿಳಿಸಿದ್ದಾರೆ.
ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ಕಳೆದ ಆರು ತಿಂಗಳ ಹಿಂದೆ ಹಲ್ಲರೆ ಗ್ರಾಮ ಪಂಚಾಯಿತಿ ನಡಾವಳಿಯಂತೆ ಗ್ರಾಮದ ರಸ್ತೆ ಒಂದಕ್ಕೆ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಏರ್ಪಟ್ಟು ನಾಮಫಲಕ ಅಳವಡಿಸುವುದು ಹಾಗೆಯೇ ನಿಂತಿತ್ತು. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತಾಲೂಕು ತಹಸಿಲ್ದಾರ್ ಹಾಗೂ ಡಿವೈಎಸ್ ಪಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ ಶೀಘ್ರದಲ್ಲೇ ನಾಮಫಲಕ ಅಳವಡಿಸಿ ನ್ಯಾಯ ದೊರಕಿಸಿಕೊಡುವ ಭರವಸೆ ಹಾಗೂ ಗಡುವು ನೀಡಿದ್ದರು.
ಗಡುವು ಮುಗಿದರು ಇನ್ನೂ ಅದರ ಬಗ್ಗೆ ಯಾವುದೇ ಮಾಹಿತಿ ಹಾಗೂ ಕಾರ್ಯಕ್ರಮ ರೂಪಿಸದೆ ಇರುವುದು ನಿಜಕ್ಕೂ ತಾಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ನಮ್ಮ ಧಿಕ್ಕಾರವಿದೆ ಎಂದರು.
ತಾಲೂಕು ಮತ್ತು ಜಿಲ್ಲಾ ಆಡಳಿತ ವೈಫಲ್ಯ ಖಂಡಿಸಿ ಇದೆ 29ನೇ ತಾರೀಕಿನಂದು ಶನಿವಾರ ನಂಜನಗೂಡಿನಿಂದ ಹಲ್ಲರೆ ಗ್ರಾಮಕ್ಕೆ ಪಾದಯಾತ್ರೆ ನಡೆಸುವ ಮೂಲಕ ಹಲ್ಲರೆ ಚಲೋ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಪರ ಸಂಘಟನೆಗಳ ನೂರಾರು ಕಾರ್ಯಕರ್ತ ಮುಖಂಡರು ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಒಂದು ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ತಾಲೂಕು ಮತ್ತು ಜಿಲ್ಲಾಡಳಿತವೇ ನೇರ ಹೊಣೆಗಾರರಾಗಬೇಕಾಗುತ್ತದೆ. ಇಲ್ಲಿ ನಿಜವಾದ ಅಂಬೇಡ್ಕರ್ ವಿರೋಧಿಗಳು ಅಧಿಕಾರಿಗಳೇ ಎಂದು ಕಿಡಿ ಕಾರಿದರು.
ಇದು ಸಿಎಂ ತವರು ಜಿಲ್ಲೆ ಆದ್ದರಿಂದ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಪುಟ್ಟಸ್ವಾಮಿ ಪ್ರಧಾನ ಕಾರ್ಯದರ್ಶಿ ಜಯ ಶಂಕರ್ ಸಹಕಾರ್ಯದರ್ಶಿ ಕುಮಾರ್ ಖಜಾಂಚಿ ಯಶವಂತ್ ಕುಮಾರ್ ಮಾಧ್ಯಮ ಕಾರ್ಯದರ್ಶಿ ಪ್ರಶಾಂತ್ ಮುಖಂಡರಾದ ಅಭಿ ನಾಗಭೂಷಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು