8:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ನಂಜನಗೂಡಿನ‌ ಕಸುವಿನ ಹಳ್ಳಿಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

14/03/2024, 07:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಸುವಿನಳ್ಳಿ ಗ್ರಾಮದಲ್ಲಿ ಇಂದು ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ನ ಅಂಗ ಸಂಸ್ಥೆಯಾದ ವಿವೇಕಾನಂದ ಸ್ಮಾರಕ ಆಸ್ಪತ್ರೆ ಸರಗೂರು, ಎಂ ವಿ ಟಿ ನ್ಯಾಚುರಲ್ ಪ್ರಾಡಕ್ಟ್ ಲಿಮಿಟೆಡ್ ಸತ್ಯಮಂಗಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ ಕಸುವಿನಹಳ್ಳಿ ಇವರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಎವಿಟಿ ನ್ಯಾಚುರಲ್ ಪ್ರಾಡಕ್ಟ್ ಕಂಪನಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ದುರ್ಗಾ ಪ್ರಸಾದ್ ರಾವ್ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ, ಮೈಸೂರು ಚಾಮರಾಜನಗರ ಜಿಲ್ಲೆಯು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಸಾವಿರಾರು ಹೆಕ್ಟೇರ್ ನಲ್ಲಿ ಚಂಡು ಮಲ್ಲಿಗೆ ಹೂ ಬೆಳೆಯುವ ರೈತರಿದ್ದಾರೆ. ಚಂಡು ಮಲ್ಲಿಗೆ ಖರೀದಿಯಿಂದ ನಮ್ಮ ಕಂಪನಿಗೆ ಬರುವ ಲಾಭದಲ್ಲಿ ಗ್ರಾಮೀಣ ಭಾಗದ ರೈತರು ಸೇರಿದಂತೆ ಬಡವರ ಅನುಕೂಲಕ್ಕಾಗಿ ಕೆಲವು ಸಾಮಾಜಿಕ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದೇವೆ. ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಅಲ್ಲಲ್ಲಿ ನಡೆಸಿ ನೆರವಾಗುತ್ತಿದೆ. ಹಾಗಾಗಿ ಈ ಭಾಗದ ಜನರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಶ್ರಾಪ್ ಮಾತನಾಡಿ ಮನುಷ್ಯನಿಗೆ 40 ವರ್ಷ ತುಂಬಿದ ಮೇಲೆ ಪ್ರತಿವರ್ಷ ಬಿಪಿ, ಶುಗರ್ ಹಾಗೂ ಹೃದಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ತಿಳಿಸಿದರು.


ಇದೇ ಸಂದರ್ಭ ವಯೋವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ತಮ್ಮ ಕಾಯಿಲೆಗಳಿಗೆ ಅನುಗುಣವಾಗಿ ಆರೋಗ್ಯ ತಪಾಸಣೆಗೆ ಒಳಗಾದರು
ಶಿಬಿರದಲ್ಲಿ ನುರಿತ ತಜ್ಞ ವೈದ್ಯರುಗಳಿಂದ ಕಣ್ಣು, ಕಿವಿ ಮೂಗು ಗಂಟಲು, ಪ್ರಸೂತಿ ಮತ್ತು ಸ್ತ್ರೀರೋಗ, ಕಣ್ಣು, ದಂತ, ಕೀಲು ಮತ್ತು ಮೂಳೆ, ಮಕ್ಕಳ ಆರೋಗ್ಯ, ಹೃದಯ ತಪಾಸಣೆ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಒಳಪಟ್ಟ ರೋಗಿಗಳಿಗೆ ತಪಾಸಣೆ ನಡೆಸಿ ಸಲಹೆ ಸೂಚನೆಗಳೊಂದಿಗೆ ಉಚಿತವಾಗಿ ಔಷಧಿ ಮಾತ್ರೆಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಸುವಿನಹಳ್ಳಿ ವೈದ್ಯಾಧಿಕಾರಿಗಳಾದ,ಡಾ. ಅಮಿತ್, ವಿವೇಕಾನಂದ ಆಸ್ಪತ್ರೆಯ ಡಾ. ಶಂಕರ್, ನಾರಾಯಣ ಹೃದಯಾಲಯ ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ಮಾನಸ, ಎವಿಟಿ ನ್ಯಾಚುರಲ್ ಪ್ರಾಡಕ್ಟ್ ಸಂಸ್ಥೆಯ ಸಹಾಯಕ ವ್ಯವಸ್ಥಾಪಕ ಚಂದ್ರಶೇಖರನ್, ಕ್ಷೇತ್ರ ಸಹಾಯಕ ಹಲ್ಲರೆ ಶಿವಮೂರ್ತಿ, ಬಂಗಾರ ಶೆಟ್ಟಿ, ಕುಮಾರ್, ರಾಜಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು