10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳಾ ಡೈರಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

22/08/2024, 14:14

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲಿನ ಡೈರಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬಹುದಿನಗಳ ಬೇಡಿಕೆಯಂತೆ ಗ್ರಾಮದಲ್ಲಿ ಹಾಲಿನ ಡೈರಿಯನ್ನು ಸ್ಥಾಪನೆ ಮಾಡಲಾಗಿದೆ. ವಿಶೇಷವಾಗಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟನೆ ಮಾಡಲಾಗಿದೆ. ನಂಜನಗೂಡು ತಾಲ್ಲೂಕಿನಲ್ಲಿ 167 ಹಾಲಿನ ಡೈರಿ ಗಳಲ್ಲಿ ಸುಮಾರು 34 ಮಹಿಳಾ ಸಹಕಾರ ಸಂಘದಲ್ಲಿ ಮಹಿಳೆಯರೇ ಕಾರ್ಯಾ ನಿರ್ವಹಿಸುತ್ತಿದ್ದಾರೆ. ದೊಡ್ಡ ಕವಲಂದೆ ಗ್ರಾಮದಲ್ಲಿ ಮೊಟ್ಟಮೊದಲ ಬಾರಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ತೆರೆಯಲಾಗಿದೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿಕೊಂಡು ಹೋಗಬೇಕು. ಗ್ರಾಮದ ರೈತರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡುವ ಮೂಲಕ ಸಂಘವನ್ನು ಲಾಭದತ್ತ ಕೊಂಡೊಯ್ಯಬೇಕು. ಸಂಘದಿಂದ ಸಿಗುವ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷೆ ವಸೀಮ್ ಬೇಗಂ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ವೆಂಕಟೇಶ್, ಉಪಾಧ್ಯಕ್ಷ ಆರ್. ಪ್ರಶಾಂತ್ ಕುಮಾರ್, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕಿ ನೀಲಾಂಬಿಕೆ, ಸಹಾಯಕ ವ್ಯವಸ್ಥಾಪಕ ಡಾ‌.ಅಕ್ಷಯ್ ಕುಮಾರ್, ವಿಸ್ತರಣಾಧಿಕಾರಿ ಮಹದೇವಸ್ವಾಮಿ, ಸಂಘದ ಮುಖ್ಯ ಕಾರ್ಯನಿರ್ವಾಹಕ,ಅಧಿಕಾರಿ ಕಾವೇರಿ,ಮುಖಂಡರಾದ ಆನಂದ್, ರಾಹುಲ್, ಸಿದ್ದಲಿಂಗಯ್ಯ ಸೇರಿದಂತೆ ಸಂಘದ ನಿರ್ದೇಶಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು