12:38 PM Monday21 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಲ್ಲದೆ ನಡೆದೇ ಬಿಟ್ಟಿತು ಮಹಿಳಾ ಗ್ರಾಮ ಸಭೆ..!

20/11/2024, 20:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಲ್ಲದ ಮಹಿಳಾ ಗ್ರಾಮ ಸಭೆ ನಡೆಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಬಿಳಿಗೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ, ಆರೋಗ್ಯ ಗ್ರಾಮ, ಗ್ರಾಮ ನೈರ್ಮಲ್ಯ ತರಬೇತಿಯನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗೆ ಮಾಹಿತಿ ನೀಡದೆ ಗ್ರಾಮ ಸಭೆಯನ್ನು ಬಿಳಿಗೆರೆ ಗ್ರಾ.ಪಂ ಆಡಳಿತ ನಡೆಸುತ್ತಿತ್ತು. ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮತ್ತು ಬೆಳಗುಂದ ಅರ್ಜುನ್ ಸಭೆಗೆ ಹಾಜರಾಗಿ ಪಿಡಿಒ ವಿರುದ್ಧ ಕಿಡಿಕಾರಿದ್ದಾರೆ.

ಮೂರು ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕರನ್ನು ಆಹ್ವಾನಿಸದೆ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೀಮಿತವಾಗಿದೆ. ಮಹಿಳೆಯರು ಇಲ್ಲದೆ ಮಹಿಳಾ ಗ್ರಾಮ ಸಭೆ ನಡೆಸಲಾಗುತ್ತಿದೆ. ಮಹಿಳೆಯರ ಕುಂದು ಕೊರತೆ ಬಗೆಹರಿಸಲು ಮಹಿಳಾ ಗ್ರಾಮ ಸಭೆಯನ್ನು ಕರೆಯಲಾಗಿದೆ. ಮಹಿಳಾ ಗ್ರಾಮ ಸಭೆಯ ಬಗ್ಗೆ ಟಾಮ್ ಟಾಮ್ ಹೊಡೆಸಿ ಪ್ರತಿ ಮಹಿಳೆಯರಿಗೂ ಸಭೆಯ ಬಗ್ಗೆ ತಿಳಿಸಬೇಕು. ಹಾಗೇಯೇ ಪ್ರತಿ ಹಳ್ಳಿಗಳಲ್ಲಿಯೂ ಮಹಿಳಾ ಗ್ರಾಮ ಸಭೆ ಮಾಡಬೇಕು.
ಆದರೆ, ಬಿಳಿಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಗಣೇಶ್ ಕಾರ್ಯದರ್ಶಿ ಪುಟ್ಟರಾಜು ನಿಯಮಗಳನ್ನು ಗಾಳಿಗೆ ತೂರಿ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ. ಮಹಿಳೆಯರಿಗೆ ಯಾವುದೇ ಮಾಹಿತಿ ನೀಡದೆ ಕೇವಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಹಿಳಾ ಗ್ರಾಮ ಸಭೆ ಸೀಮಿತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತಿ ಆಡಳಿತ ಕಾಟಚಾರಕ್ಕೆ ಈ ಸಭೆಗಳನ್ನು ಮಾಡಿದ್ದಾರೆ. ಈ ಕೂಡಲೇ ಮಹಿಳಾ ಗ್ರಾಮ ಸಭೆಯನ್ನು ಮುಂದೂಡಬೇಕು. ಪಿಡಿಒ ಮತ್ತು ಕಾರ್ಯದರ್ಶಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು