3:56 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

25/01/2025, 21:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ 70 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಅವರುತಾಲೂಕಿನ ಶ್ರೀ ಕ್ಷೇತ್ರ ಸಂಗಮ, ಕಪ್ಪಸೋಗೆ, ದೇಬೂರು, ಉಪ್ಪಿನಹಳ್ಳಿ ಗ್ರಾಮಗಳಲ್ಲಿ 2 ಕೋಟಿ 70 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಸಂಗಮ ಕ್ಷೇತ್ರದಲ್ಲಿ ಮಾತನಾಡಿದರು.


ತಾಲೂಕಿನ ಮಹಾದೇವತಾತ ರವರ ಸಂಗಮ ಒಂದು ಪುಣ್ಯ ಕ್ಷೇತ್ರವಾಗಿದೆ ಇಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಕೇವಲ ಬದ್ದತೆ ಮತ್ತು ಸೇವೆಯ ಉದ್ದೇಶದಿಂದಾಗಿ 1 ಕೋಟಿ 50 ಲಕ್ಷ ರು ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಗಮ ಕ್ಷೇತ್ರದ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ನನಗೆ ಸೂಚನೆ ನೀಡುವ ಮೂಲಕ ಅವರು ಸೇವೆಯ ಬದ್ಧತೆಯನ್ನು ತೋರಿದ್ದಾರೆ. ಮುಂದೆ ಹಂತ ಹಂತವಾಗಿ ಸಂಗಮ ಕ್ಷೇತ್ರದ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಅಲ್ಲದೆ ಕಪ್ಪಸೋಗೆ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನುಗುನಾಲೆಗೆ ಸೇತುವೆ ನಿರ್ಮಾಣ, ದೇಬೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 50 ಲಕ್ಷ ವೆಚ್ಚದಲ್ಲಿ ರಾಜ್ಯ ಹೆದ್ದಾರಿ 57ರಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿ, ಕಾಡ ಇಲಾಖೆಯ ಅನುದಾನದಲ್ಲಿ ತಾಲೂಕಿನ ಉಪ್ಪಿನ ಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಶ್ರೀಕಂಠನಾಯಕ, ಸಂಗಮ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ, ಮಾಜಿ ಅಧ್ಯಕ್ಷ ಕೆಂಡಗಣ್ಣಪ್ಪ, ಕಾಂಗ್ರೆಸ್ ಎಸ್ಸಿ ಬ್ಲಾಕ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಹಾಡ್ಯ ಗ್ರಾಪಂ ಅಧ್ಯಕ್ಷ ಹರೀಶ್, ಮುಖಂಡರಾದ ಕುರಿಹುಂಡಿರಾಜು,, ಎಂ.ಮಾದಪ್ಪ, ಸಂಗರಾಜು, ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು