2:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು ನಾಗರಿಕ ವೇದಿಕೆಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ

13/05/2024, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಾಗರಿಕ ವೇದಿಕೆ ವತಿಯಿಂದ ‍ಚಾಮರಾಜನಗರ ಲೋಕಸಭಾ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ನುಡಿ ನಮನ ಸಲ್ಲಿಸಿ, ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು. ನಾನು ಇವತ್ತು ವಕೀಲ, ಕಾನೂನು ವಿದ್ಯಾರ್ಥಿಯಾಗಿದ್ದಿನಿ ಎಂದರೆ ಅದಕ್ಕೆ ಪ್ರಸಾದ್ ಸಾಹೇಬರ ಸಲಹೆ ಸೂಚನೆ ಕಾರಣ. ಅವರ ಅಗಲಿಕೆ ನಮ್ಮ ರಾಜ್ಯ, ನಮ್ಮ ತಾಲ್ಲೂಕಿಗೆ ನಷ್ಟ ಉಂಟುಮಾಡಿದೆ.‌ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದರು.


ಬಳಿಕ ಚಿಂತಕ ದೇವನೂರು ಶಂಕರ್ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ರವರು, ಬುದ್ಧ, ಬಸವ ,ಅಂಬೇಡ್ಕರ್ ರವರ, ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡಿದ್ದರು. ಹಿಂದುಳಿದ ವರ್ಗಗಳ, ದಲಿತರ ಮತ್ತು ಶೋಷಿತರ ಗಟ್ಟಿ ಧ್ವನಿಯಾಗಿದ್ದರು ಆದರೆ ಎಂದು ಕೂಡ ದ್ವೇಷ ರಾಜಕಾರಣ ಮಾಡಲಿಲ್ಲ. ತಮ್ಮ ಜೀವನವನ್ನು ಸಮಾಜಕಾಗಿ ಅರ್ಪಿಸಿಕೊಂಡಿದ್ದರು. ಎಲ್ಲರನ್ನೂ ಪ್ರೀತಿಸುತ್ತಿದ್ದರು.
ಮಾನವ ಸಂಬಂಧಗಳು ಗಟ್ಟಿಗೋಳ್ಳಬೇಕಾದರೆ ಪ್ರೀತಿ, ಅಂತಃಕರಣ, ಮೈತ್ರಿಯಿಂದ ಸಾಧ್ಯ ಎಂದು ನಂಬಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಹರವೆ ಮಠದ ಶ್ರೀಗಳಾದ ಸರ್ಪ ಭೂಷಣ ಸ್ವಾಮೀಜಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬಿಜೆಪಿ ಮುಖಂಡ ಎಸ್.ಮಹದೇವಯ್ಯ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು