12:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು; ಜೂನ್ 21ರಂದು ರಾಜ್ಯ ಸರಕಾರದ ವಿರುದ್ಧ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ಹರ್ಷವರ್ಧನ್

20/06/2024, 22:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜೂನ್ 21 ಶುಕ್ರವಾರ ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದ್ದಾರೆ.


ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ನಮ್ಮ ಪಕ್ಷದ ವರಿಷ್ಠರ ನಿರ್ಧಾರದಂತೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲೂ ಸಹ ನಡೆಸಲಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಸಿಎಂ ಸಿದ್ದು ಸರ್ಕಾರ ದಿವಾಳಿಯಾಗಿದೆ ಇವರು ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿಗಳಾಗಿಲ್ಲ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಇಡೀ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 53 ಸಾವಿರ ಕೋಟಿ ಹಣ ನೀಡಲಾಗುತ್ತಿದ್ದು ಇದರಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಅಂಕಿ ಅಂಶಗಳ ಸಮೇತ ತಿಳಿಸಿ ಇದರಿಂದ ಇನ್ನೂ ಹೆಚ್ಚಿನ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎಂದು ಎಚ್ಚರಿಸಿದರು.
ಇದರಿಂದಾಗಿ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನಕ್ಕೂ ಕಡಿವಾಣ ಹಾಕಲಾಗಿದೆ. ಅಲ್ಲದೆ ಕೆಲವು ಇಲಾಖೆಗಳ ಅನುದಾನಗಳನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ.
ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಹಣ ಲೂಟಿಯಾಗಿದ್ದು ಇದರಿಂದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಬಟಾ ಬಯಲಾಗಿದೆ ಎಂದು ಸಿಎಂ ಸಿದ್ದುಗೆ ಗುದ್ದು ನೀಡಿದರು.
ರಾಜ್ಯ ಸರ್ಕಾರದ ಜೊತೆಗೆ ನಂಜನಗೂಡಿನಲ್ಲೂ ಸಹ ಶಾಸಕರ ಕಾರ್ಯವೈಕರಿಂದಾಗಿ ತಾಲೂಕು ಆಡಳಿತ ಸಂಪೂರ್ಣ ಕುಸಿದಿದೆ ಶಾಸಕರಾಗಿ ಒಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಆಗಿಲ್ಲ. ನನ್ನ ಅವಧಿಯಲ್ಲಿ ಬಿಡುಗಡೆಯಾಗಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಗ್ಯಾರಂಟಿ ಯೋಜನೆಗಳಿಗೆ ನಮ್ಮ ತಕರಾರಿಲ್ಲ. ಆದರೆ ಅದಕ್ಕೆ ಹಣ ಹೊಂದಿಸುವ ನಿಟ್ಟಿನಲ್ಲಿ ಈ ರೀತಿ ಸಾರ್ವಜನಿಕರಿಗೆ ಬರೆ ಎಳೆಯುವುದು ಸರಿಯಲ್ಲ. ಹಾಗಾಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಪರಿಶೀಲನೆ ನಡೆಸಿ ಉತ್ತಮ ಆಡಳಿತ ನೀಡುವಂತೆ ತಿಳಿಸಿದರು.
21ರಂದು ಶುಕ್ರವಾರ ನಡೆಯುವ ಪ್ರತಿಭಟನೆಯಲ್ಲಿ ತಾಲೂಕಿನ ಬಿಜೆಪಿಯ ಎಲ್ಲಾ ಕಾರ್ಯಕರ್ತ ಮುಖಂಡರು ಭಾಗವಹಿಸುವಂತೆ ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ಓಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಬಾಲಚಂದ್ರು, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡರಾದ ಬಸವಣ್ಣ, ಕುಮಾರ್, ಶಂಕ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು