1:58 PM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ನಂಜನಗೂಡು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ

01/05/2024, 15:48

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕನ್ನಡ ಸಾಹಿತ್ಯ ಪರಿಷತ್ತು ನಂಜನಗೂಡು ಘಟಕದ ವತಿಯಿಂದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು.
ಸಂಘದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅನಾರೋಗ್ಯದಿಂದ ಮೊನ್ನೆ ಸಾವಿಗೀಡಾದ ಚಾಮರಾಜನಗರ ಸಂಸದ ವಿ ಶ್ರೀನಿವಾಸಪ್ರಸಾದ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮೇಣದಬತ್ತಿ ಹಚ್ಚಿ ಮೌನಾಚರಣೆ ಆಚರಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಗೌರವಾಧ್ಯಕ್ಷ ಚಿಕ್ಕರಂಗನಾಯಕ, ಅಧ್ಯಕ್ಷೆ ಲತಾ ಮುದ್ದುಮೋಹನ್ ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಗಲಿದ ತಮ್ಮ ನೆಚ್ಚಿನ ನಾಯಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಪರಿಷತ್ತಿನ ತಾಲೂಕು ಘಟಕದ ಗೌರವಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಅಧ್ಯಕ್ಷೆ ಲತಾ ಮುದ್ದುಮೋಹನ್ ಮಾತನಾಡಿ
ಶ್ರೀನಿವಾಸ್ ಪ್ರಸಾದ್ ಅವರು ಒಬ್ಬ ವ್ಯಕ್ತಿಯಾಗಿರಲಿಲ್ಲ. ಒಂದು ಶಕ್ತಿಯಾಗಿದ್ದರು. ಕಳೆದ 50 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಆರು ಬಾರಿ ಸಂಸದರಾಗಿ, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿ ಶೋಷಿತ ಹಾಗೂ ದಲಿತರ ಧ್ವನಿಯಾಗಿದ್ದರು. ಅವರ ಸ್ವಾಭಿಮಾನಕ್ಕೆ ಧಕ್ಕೆ ಅದಾಗಲೆಲ್ಲ ಪಕ್ಷ ಬಿಟ್ಟು ಬೇರೆ ಪಕ್ಷ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಿದ್ದರು. ಅವರ ಸುದೀರ್ಘ ರಾಜಕಾರಣದಲ್ಲಿ ಶುದ್ಧ ಹಸ್ತರಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದಂತಹ ಮಹಾನ್ ವ್ಯಕ್ತಿಯಾಗಿದ್ದರು ಎಂದು ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ರಂಗಸ್ವಾಮಿ, ಪ್ರಭಾಕರ್, ಶೋಭಾ, ಬಿಳಿಕೆರೆ ಹೋಬಳಿ ಅಧ್ಯಕ್ಷೆ ಮಂಜುಳಾ, ಕಸಬಾ ಹೋಬಳಿ ಅಧ್ಯಕ್ಷೆ ಮಂಜುಳಾ ಅರಸ್, ಸತೀಶ್ ದಳವಾಯಿ, ಸಿದ್ದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು