3:17 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವಕ್ಕೆ ಚಾಲನೆ

16/12/2024, 21:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 27ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ನೀಡಲಾಯಿತು.


ಡಿಸೆಂಬರ್ 16ರಿಂದ 26ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಬ್ರಹ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಶಬರಿಮಲೆ ಪ್ರಧಾನ ಅರ್ಚಕರಾದ ಶ್ರೀಕಂಠ ರಾಜೀವರು ತಂತ್ರಿಗಳ ಮಾರ್ಗದರ್ಶನದಲ್ಲಿ ಇಂದು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಧ್ವಜಸ್ತಂಬಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧ್ವಜಾರೋಹಣ ಮಾಡಲಾಯಿತು.
ಇಂದು ಬೆಳಗ್ಗೆಯಿಂದಲೇ ಶ್ರೀ ಸ್ವಾಮಿ ಅಯ್ಯಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಅಶ್ವದ ಲಾಂಛನ ಹೊಂದಿರುವ ಧ್ವಜವನ್ನು ಅಯ್ಯಪ್ಪ ಭಕ್ತರ ಹರ್ಷೋದ್ಗಾರದೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಬಳಿಕ ದೇವಾಲಯದ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿ ಮಾತನಾಡಿ 10 ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವಕ್ಕೆ ಇಂದು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ನಾಳೆ 17ರಂದು ವಿಶೇಷ ಪಡಿ ಪೂಜೆ 20ರಂದು ಬೃಹತ್ ಅನ್ನ ಸಂತರ್ಪಣೆ ಹಾಗೂ ರಾಜಭೀದಿಗಳಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮತ್ತು ತೆಪ್ಪೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಉಳಿದಂತೆ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗಾಗಿ ಬ್ರಹ್ಮೋತ್ಸವದ ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಪುರ ಪ್ರಮುಖರು ಅಯ್ಯಪ್ಪ ಸ್ವಾಮಿ ಭಕ್ತರುಗಳಾದ ಮಂಜುನಾಥ್, ಮೋಹನ್, ನಾರಾಯಣಪ್ಪ, ಡಾ., ರಾಘವೇಂದ್ರ, ಶ್ರೀಧರ್, ನಾಗರಾಜ್ , ವೆಂಕಟೇಶ್, ನಾರಾಯಣ ರೆಡ್ಡಿ, ಗಿರೀಶ್, ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು