11:02 PM Saturday19 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಶ್ರೀಕಂಠೇಶ್ವರ ಸ್ವಾಮಿ ತೆಪ್ಪೋತ್ಸವ

20/11/2024, 15:18

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿ ನವೆಂಬರ್ 17ರಂದು ಭಾನುವಾರ ನಡೆದ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವವು ಭಾನುವಾರ ಸಂಜೆ ಕಪಿಲಾ ನದಿಯಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ದಾ ಭಕ್ತಿಯಿಂದ ನಡೆಯಿತು.


ಬಣ್ಣ ಬಣ್ಣದ ಹೂವು ಹಾಗೂ ಚಿನ್ನ ವಜ್ರಾಭರಣಗಳಿಂದ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಕಪಿಲಾ ನದಿ ತೀರದ ಸ್ನಾನ ಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ಮಂಗಳ ವಾದ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿ ನಿರ್ಮಿಸಲಾದ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ತೆಪ್ಪೋತ್ಸವ ನಡೆಸಲಾಯಿತು.
ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಚಲಿಸುವ ಮೂಲಕ ಭಕ್ತರಿಗೆ ದರ್ಶನ ನೀಡಿ ಭಕ್ತರ ಮನಸೂರೆಗೊಂಡಿತು. ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ನಡೆಯಿತು.
ನಂಜನಗೂಡು ನಗರವು ಸೇರಿದಂತೆ ವಿವಿಧ ಕಡೆಯಿಂದ ಬಂದ ಸಾವಿರಾರು ಭಕ್ತರು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ನಮನ ಸಲ್ಲಿಸಿದರು.
ನಂತರ ತಪೋತ್ಸವದಿಂದ ಹೊರ ತಂದ ಶ್ರೀ ಅವರ ಉತ್ಸವ ಮೂರ್ತಿಯನ್ನು ಸಣ್ಣ ರಥದಲ್ಲಿ ಕೂರಿಸಿ ಪಟ್ಟಣದ ರಥ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಸತೀಶ್ ಸೇರಿದಂತೆ ದೇವಾಲಯದ ಅರ್ಚಕ ವೃಂದದವರು ಉಪಸ್ಥಿತರಿದ್ದರು.
ನಂತರ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ತೆಪ್ಪೋತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು