11:32 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ನಂಜನಗೂಡು ಕ್ಷೇತ್ರದ ಸರ್ವ ಜನಾಂಗದ ಏಳಿಗೆಗೆ ಸದಾ ಸಿದ್ದ: ವಾಲ್ಮೀಕಿ ಜಯಂತಿಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್

17/10/2024, 20:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಒಂದು ಮೀಸಲು ವಿಧಾನಸಭಾ ಕ್ಷೇತ್ರ. ತಾಲೂಕಿನ ಸರ್ವ ಜನಾಂಗದ ಏಳಿಗೆಗೆ ದಿವಂಗತ ತಂದೆಯವರ ಆಶಯದಂತೆ ರಾಜಕಾರಣ ಮಾಡುವೆ ಜನರ ಅಭಿವೃದ್ಧಿಗೆ ಸದಾ ಸಿದ್ದನಿದ್ದೇನೆ ಎಂದು ಶಾಸಕರಾದ ದರ್ಶನ್ ಧ್ರುವ ನಾರಾಯಣ್ ಹೇಳಿದರು.
ನಗರದ ಶ್ರೀ ನಂಜುಂಡೇಶ್ವರನ ದೇವಾಲಯದ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಆಯೋಜನೆ ಮಾಡಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಶಾಸಕ ದರ್ಶನ್ ಧ್ರುವ ನಾರಾಯಣ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರಾದ ತಹಸಿಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಅಧ್ಯಕ್ಷತೆಯಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ತಾಲೂಕು ಪರಿಶಿಷ್ಟ ಪಂಗಡಗಳ ಇಲಾಖೆ ವತಿಯಿಂದ ಕಾರ್ಯಕ್ರಮವನ್ನು ನಡೆಸಲಾಯಿತು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯರ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ಮಹರ್ಷಿ ವಾಲ್ಮೀಕಿ ಋಷಿಗಳು ಇಡೀ ಜಗತ್ತಿಗೆ ರಾಮಾಯಣವನ್ನು ಪರಿಚಯಿಸಿದ ಮಹಾನ್ ಸಂತರು. ಸಮಾಜದಲ್ಲಿ ಬದುಕುವ ಪ್ರತಿ ಕುಟುಂಬ ರಾಮಾಯಣದಂತೆ ಬದುಕುವ ದೇಯೋದ್ದೇಶಗಳನ್ನು ಅಳವಡಿಸಿದ್ದಾರೆ. ಇಡೀ ಜಗತ್ತಿಗೆ ರಾಮಾಯಣ ಮಹಾ ಗ್ರಂಥವನ್ನು ಪರಿಚಯಿಸಿ ಇಷ್ಟು ಶತಮಾನಗಳು ಕಳೆದರು ಪ್ರತಿ ಕುಟುಂಬದಲ್ಲಿ ರಾಮ ಲಕ್ಷ್ಮಣರಂತೆ ಬದುಕುವ ನಿಜ ಬದುಕನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ ಶತಮಾನಗಳ ಹಿಂದೆಯೇ ಸಹೋದರತೆಯನ್ನು ಸಾರಿದ ಮಹಾನ್ ಋಷಿಮುನಿಗಳು ಶ್ರೀ ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ಮತ್ತು ದೇಶಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿ ಇನ್ನು ಎಷ್ಟೇ ಶತಮಾನಗಳು ಕಳೆದರೂ ಕೂಡ ರಾಮಾಯಣ ಜಗತ್ತಿನಲ್ಲಿ ಜೀವಂತವಾಗಿರುತ್ತದೆ ಎಂದು ಮಹರ್ಷಿ ವಾಲ್ಮೀಕಿ ಅವರ ಚರಿತ್ರೆಯ ಬಗ್ಗೆ ವಿವರಿಸಿದರು.
ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮುನ್ನ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಿಂದ ಹೊರಟ ಅದ್ದೂರಿ ಮೆರವಣಿಗೆಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಸೇರಿದಂತೆ ಮತ್ತಿತರ ಗಣ್ಯರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಮಂಗಳವಾದ್ಯ, ಬ್ಯಾಂಡ್ ವಾದನ, ಡೊಳ್ಳು ಕುಣಿತ, ಗಾರುಡಿ ಗೊಂಬೆ ಸೇರಿದಂತೆ ಹಲವು ಜಾನಪದ ಕಲಾತಂಡಗಳೊಂದಿಗೆ ಕುದುರೆ ಸಾರೋಟಿನ ಮಾದರಿಯಲ್ಲಿನ ವಾಹನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರವನ್ನು ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಅಂಗನವಾಡಿ, ಆಶಾ ಕಾರ್ಯಕರ್ತರು ವಿವಿಧಪರ ಸಂಘಟನೆಗಳ ಮುಖಂಡರು, ತಾಲೂಕಿನ ನಾಯಕ ಸಮಾಜದ ಬಂಧುಗಳು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯಾನಬಾನು, ತಾಲೂಕು ನಾಯಕ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಗೌರವಾಧ್ಯಕ್ಷ ಚಿಕ್ಕರಂಗನಾಯಕ, ನಗರಸಭಾ ಮಾಜಿ ಅಧ್ಯಕ್ಷರಾದ ಹೆಡತಲೆ ನಾಗರಾಜ್ ಪರಿಶಿಷ್ಟ ವರ್ಗಗಳ ಇಲಾಖೆ ಅಧಿಕಾರಿ ಸಿದ್ದರಾಜು , ನಗರಸಭೆ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ನಗರಸಭಾ ಸದಸ್ಯರುಗಳು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು