ಇತ್ತೀಚಿನ ಸುದ್ದಿ
ನನಸಾಗದ ಭಾರತೀಯ ಸೇನೆಗೆ ಸೇರುವ ಕನಸು: ಶೃಂಗೇರಿ ಸಮೀಪದ ಯುವಕ ನೇಣಿಗೆ ಶರಣು
29/02/2024, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ಈತ ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದ.
ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಕಾರ್ತಿಕ್ ನೇಣಿಗೆ ಶರಣಾಗಿದ್ದಾನೆ. ಸೇನೆಗೆ ಸೇರಬೇಕೆಂದು ಕಾರ್ತಿಕ್ 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ. ಸೇನಾ ನೇಮಕಾತಿ ಪರೀಕ್ಷೆಯ ರಿಸಲ್ಟ್ ಬಂದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.